‘ಯೋಗಿ ಇಲ್ಲದೆ ಉತ್ತರ ಪ್ರದೇಶವೇ ಇಲ್ಲ!’ ಬಿಜೆಪಿ ಗೆಲುವಿನ ಭವಿಷ್ಯ ನುಡಿದ ಸಂಜಯ್ ರಾವತ್; ಕಾಂಗ್ರೆಸ್, ಅಖಿಲೇಶ್ಗೆ ಮುಜುಗರ?
ಸದಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಸಂಜಯ್ ರಾವತ್ ಬಾಯಲ್ಲೀಗ ಯೋಗಿ ಆದಿತ್ಯನಾಥ್ ಗುಣಗಾನ! ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದ ಶಿವಸೇನಾ ನಾಯಕ! ಅಷ್ಟಕ್ಕೂ ರಾವತ್ ಅವರ ಈ ಅಚ್ಚರಿಯ ಹೇಳಿಕೆ ಹಿಂದಿನ ಕಾರಣವೇನು?
ಮುಂಬೈ (ನ.27): ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಚರ್ಚೆ ನಡೆಯುತ್ತಿರುವಾಗಲೇ ಶಿವಸೇನಾ ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸದಾ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ರಾವತ್ ಇದೀಗ ಯೋಗಿ ಆದಿತ್ಯನಾಥ್ ಪರ ಮಾತನಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
‘ಯೋಗಿ ಇಲ್ಲದಿದ್ದರೆ ಉತ್ತರ ಪ್ರದೇಶವೇ ಇಲ್ಲ!’ಉತ್ತರ ಪ್ರದೇಶಕ್ಕೆ ಯೋಗಿ ಆದಿತ್ಯನಾಥ್ ಅವರ ನಾಯಕತ್ವ ಅಗತ್ಯವಿದೆ. ಯೋಗಿ ಸಮರ್ಥ ನಾಯಕ ಹಾಗೂ ಹಿಂದುತ್ವದ ಪ್ರಮುಖ ಮುಖವಾಗಿದ್ದಾರೆ. ಅವರ ಮೇಲೆ ನಮಗೆ ಪ್ರೀತಿ ಮತ್ತು ಗೌರವವಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಇಷ್ಟಕ್ಕೇ ಸುಮ್ಮನಾಗದ ರಾವತ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲಿದೆ. ಹೊಸದಾಗಿ ಆಯ್ಕೆಯಾಗುವ ಶಾಸಕರು ಯೋಗಿ ಆದಿತ್ಯನಾಥ್ ಅವರನ್ನೇ ಮುಖ್ಯಮಂತ್ರಿಯಾಗಿ ಬೆಂಬಲಿಸುವ ವಿಶ್ವಾಸವಿದೆ ಎಂದಿದ್ದಾರೆ.
ಬಿಜೆಪಿಯಲ್ಲೇ ಶುರುವಾಗಿದ್ಯಾ ಸಿಎಂ ಕುರ್ಚಿ ಕದನ?ಇತ್ತೀಚೆಗೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ನೀಡಿದ್ದ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿತ್ತು.
ಬಿಜೆಪಿ ಯಾವುದೇ ವ್ಯಕ್ತಿಯ ಮುಖವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುವುದಿಲ್ಲ. ಕಮಲದ ಚಿಹ್ನೆಯಡಿ ಚುನಾವಣೆ ಎದುರಿಸಲಿದ್ದು, ಫಲಿತಾಂಶದ ಬಳಿಕ ಮುಖ್ಯಮಂತ್ರಿ ಯಾರು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದಿದ್ದರು.
ಈ ಹೇಳಿಕೆಯ ಬೆನ್ನಲ್ಲೇ ಯೋಗಿ ಆದಿತ್ಯನಾಥ್ ಬದಲಿಗೆ ಬಿಜೆಪಿ ಹೊಸ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾ ಎಂಬ ಚರ್ಚೆ ಶುರುವಾಗಿತ್ತು.
ಬಿಜೆಪಿಗಿಂತ ಮೊದಲೇ ಯೋಗಿ ಪರ ಬ್ಯಾಟ್ ಬೀಸಿದ ರಾವತ್!ಮುಂದಿನ ಚುನಾವಣೆಗೆ ಯೋಗಿ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದ್ದರೆ ಉತ್ತಮವಾಗಿತ್ತು ಎಂದು ಸಂಜಯ್ ರಾವತ್ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿಯೊಳಗೆ ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ಚರ್ಚೆ ನಡೆಯುತ್ತಿರುವಾಗಲೇ ವಿರೋಧ ಪಕ್ಷದ ನಾಯಕರೊಬ್ಬರು ಯೋಗಿ ಪರ ಮಾತನಾಡಿರುವುದು ವಿಶೇಷವಾಗಿದೆ.ರಾಹುಲ್ ಗಾಂಧಿ, ಅಖಿಲೇಶ್ ಯಾದವ್ಗೆ ಮುಜುಗರ?

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮೈತ್ರಿಕೂಟ ಬಿಜೆಪಿ ವಿರುದ್ಧ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. ಆದರೆ ಇಂಡಿಯಾ ಒಕ್ಕೂಟದ ಭಾಗವಾಗಿರುವ ಶಿವಸೇನಾ ಉದ್ಧವ್ ಠಾಕ್ರೆ ಬಣದ ಸಂಜಯ್ ರಾವತ್ ಅವರೇ ಬಿಜೆಪಿ ಬಹುಮತ ಪಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಈ ಹೇಳಿಕೆ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಕ್ಕೆ ರಾಜಕೀಯವಾಗಿ ಮುಜುಗರ ಉಂಟುಮಾಡಬಹುದೇ ಎಂಬ ಪ್ರಶ್ನೆ ಎದುರಾಗಿದೆ.ರಾವತ್ ಹೇಳಿಕೆ ಹಿಂದಿದೆಯಾ ರಾಜಕೀಯ ಲೆಕ್ಕಾಚಾರ?

ಯೋಗಿ ಆದಿತ್ಯನಾಥ್ ಅವರ ನಾಯಕತ್ವದ ಬಗ್ಗೆ ವೈಯಕ್ತಿಕ ಗೌರವದಿಂದ ರಾವತ್ ಈ ಹೇಳಿಕೆ ನೀಡಿದ್ದಾರಾ? ಅಥವಾ ಬಿಜೆಪಿಯೊಳಗಿನ ನಾಯಕತ್ವದ ಚರ್ಚೆಗೆ ಪ್ರತಿಕ್ರಿಯೆಯಾಗಿ ಮಾತನಾಡಿದ್ದಾರಾ? ಎಂಬ ಕುತೂಹಲ ಮೂಡಿದೆ.
ರಾವತ್ ಅವರ ಹೇಳಿಕೆಗೆ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ನಾಯಕರು ಹೇಗೆ ಪ್ರತಿಕ್ರಿಯಿಸಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.