2027ರ ಬಜೆಟ್ನಲ್ಲಿ ಯುವಜನತೆಗೆ ಬಂಪರ್ ಗಿಫ್ಟ್ ಸಿಗುತ್ತಾ? ಮೊದಲ ಬಾರಿಗೆ Gen-Z ಜೊತೆ ನಿರ್ಮಲಾ ಸೀತಾರಾಮನ್ ಮಹತ್ವದ ಸಭೆ!
ಮುಂದಿನ ಕೇಂದ್ರ ಬಜೆಟ್ನಲ್ಲಿ ಯುವಜನತೆಗೆ ಭರ್ಜರಿ ಸಿಹಿಸುದ್ದಿ ಸಿಗಲಿದೆಯಾ? ಉದ್ಯೋಗಾವಕಾಶಗಳು ಹೆಚ್ಚಾಗುತ್ತಾ? ಇಂಟರ್ನ್ಶಿಪ್ ಯೋಜನೆಯಲ್ಲಿ ಮಹತ್ವದ ಬದಲಾವಣೆ ಆಗುತ್ತಾ? ಇಂತಹದ್ದೊಂದು ಕುತೂಹಲಕ್ಕೆ ಕಾರಣವಾಗಿದ್ದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಡೆಸಿರುವ ವಿಶೇಷ ಸಭೆ. 2027-28ನೇ ಸಾಲಿನ ಕೇಂದ್ರ ಬಜೆಟ್ ಸಿದ್ಧತೆಯ ಭಾಗವಾಗಿ ಇದೇ ಮೊದಲ ಬಾರಿಗೆ ಜೆನ್ ಝಿ ಪ್ರತಿನಿಧಿಗಳೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಸಲಾಗಿದೆ.ಮೊದಲ ಬಾರಿಗೆ ಬಜೆಟ್ ಸಿದ್ಧತೆಯಲ್ಲಿ Gen-Z ಅಭಿಪ್ರಾಯ!
ನವೆಂಬರ್ 26ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಯುವ ಪ್ರತಿನಿಧಿಗಳೊಂದಿಗೆ ವಿಶೇಷ ಸಮಾಲೋಚನಾ ಸಭೆ ನಡೆಸಿದರು. ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಯುವಜನತೆಯ ಸಮಸ್ಯೆಗಳು, ನಿರೀಕ್ಷೆಗಳು ಹಾಗೂ ಭವಿಷ್ಯದ ಉದ್ಯೋಗಾವಕಾಶಗಳ ಕುರಿತು ಚರ್ಚಿಸಲಾಯಿತು.
ವಿಶೇಷ ಅಂದ್ರೆ, ಈ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿನಿಧಿಗಳಲ್ಲಿ ಸುಮಾರು ಶೇ.50ರಷ್ಟು ಮಹಿಳೆಯರಿದ್ದರು. ವಿವಿಧ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ವೃತ್ತಿಪರರು ಹಣಕಾಸು ಸಚಿವರಿಗೆ ತಮ್ಮ ಸಲಹೆಗಳನ್ನು ನೀಡಿದ್ದಾರೆ.
ಎಐ ಯುಗದಲ್ಲಿ ಯುವಜನತೆಯ ಉದ್ಯೋಗಕ್ಕೆ ಹೊಸ ಯೋಜನೆ?
ಕೃತಕ ಬುದ್ಧಿಮತ್ತೆ (AI) ಹಾಗೂ ಆಧುನಿಕ ತಂತ್ರಜ್ಞಾನದಿಂದ ಉದ್ಯೋಗ ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಈ ಬದಲಾವಣೆಗಳಿಗೆ ಯುವಜನತೆಯನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಬಲಪಡಿಸಬೇಕು ಎಂದುಪ್ರತಿನಿಧಿಗಳು ಸಲಹೆ ನೀಡಿದ್ದಾರೆ.
ಕೈಗಾರಿಕೆಗಳ ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಪಠ್ಯಕ್ರಮದಲ್ಲಿ ಬದಲಾವಣೆ ತರಬೇಕು. ಯುವಜನತೆಗೆ ಆಧುನಿಕ ತಂತ್ರಜ್ಞಾನದ ತರಬೇತಿ ನೀಡಬೇಕು ಎಂಬ ಬೇಡಿಕೆಯೂ ಸಭೆಯಲ್ಲಿ ಕೇಳಿಬಂದಿದೆ.ಪಿಎಂ ಇಂಟರ್ನ್ಶಿಪ್ ಯೋಜನೆಯಲ್ಲಿ ಮಹತ್ವದ ಬದಲಾವಣೆ ಆಗುತ್ತಾ?
ವಿದ್ಯಾಭ್ಯಾಸ ಮುಗಿಸಿದ ಯುವಜನತೆಗೆ ಉದ್ಯೋಗ ಪಡೆಯಲು ಅನುಭವದ ಕೊರತೆಯೂ ದೊಡ್ಡ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ‘ಪಿಎಂ ಇಂಟರ್ನ್ಶಿಪ್ ಯೋಜನೆ’ಯನ್ನು ಮತ್ತಷ್ಟು ಆಕರ್ಷಕ ಹಾಗೂ ಪರಿಣಾಮಕಾರಿಯಾಗಿ ರೂಪಿಸಬೇಕು ಎಂದು ಯುವ ಪ್ರತಿನಿಧಿಗಳು ಸಲಹೆ ನೀಡಿದ್ದಾರೆ.ಹೀಗಾಗಿ ಮುಂಬರುವ ಬಜೆಟ್ನಲ್ಲಿ ಇಂಟರ್ನ್ಶಿಪ್ ಅವಕಾಶಗಳ ವಿಸ್ತರಣೆ ಅಥವಾ ಯೋಜನೆಯ ಸ್ವರೂಪದಲ್ಲಿ ಬದಲಾವಣೆ ತರಲಾಗುತ್ತಾ ಎಂಬ ಕುತೂಹಲ ಮೂಡಿದೆ.
Gen-Z ಸಭೆಯಲ್ಲಿ ಪ್ರಮುಖವಾಗಿ ಚರ್ಚೆಯಾಗಿದ್ದೇನು?
– ಕೃತಕ ಬುದ್ಧಿಮತ್ತೆ ಹಾಗೂ ಆಧುನಿಕ ತಂತ್ರಜ್ಞಾನದ ತರಬೇತಿ.
– ಯುವಜನತೆಗೆ ಹೆಚ್ಚಿನ ಉದ್ಯೋಗಾವಕಾಶಗಳ ಸೃಷ್ಟಿ.
– ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಬಲವರ್ಧನೆ.
– ಕೈಗಾರಿಕೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಪಠ್ಯಕ್ರಮದಲ್ಲಿ ಬದಲಾವಣೆ.
– ಪಿಎಂ ಇಂಟರ್ನ್ಶಿಪ್ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವುದು.

13 ವಲಯಗಳು, 200ಕ್ಕೂ ಹೆಚ್ಚು ಪ್ರತಿನಿಧಿಗಳಿಂದ ಸಲಹೆ!ನವೆಂಬರ್ 16ರಿಂದ 26ರವರೆಗೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಸರಣಿ ಬಜೆಟ್ ಪೂರ್ವ ಸಮಾಲೋಚನಾ ಸಭೆಗಳು ನಡೆದಿವೆ. 13 ವಲಯಗಳು ಹಾಗೂ ಪಾಲುದಾರರ ಗುಂಪುಗಳಿಂದ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.
ಕೈಗಾರಿಕಾ ಸಂಘಗಳ ಪ್ರತಿನಿಧಿಗಳು, ಉದ್ಯಮಿಗಳು, ಶಿಕ್ಷಣ ತಜ್ಞರು ಹಾಗೂ ವಿವಿಧ ಕ್ಷೇತ್ರಗಳ ಪರಿಣತರ ಜೊತೆಗೆ ಇದೇ ಮೊದಲ ಬಾರಿಗೆ ಯುವ ಪ್ರತಿನಿಧಿಗಳ ಅಭಿಪ್ರಾಯವನ್ನೂ ಪಡೆಯಲಾಗಿದೆ.ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಅನುರಾಧಾ ಠಾಕೂರ್, ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
2027ರ ಬಜೆಟ್ ಯುವಜನತೆಯ ಭವಿಷ್ಯ ಬದಲಿಸುತ್ತಾ?ಎಐ ತಂತ್ರಜ್ಞಾನದ ಬೆಳವಣಿಗೆ, ಉದ್ಯೋಗದ ಅನಿಶ್ಚಿತತೆ ಹಾಗೂ ಕೌಶಲ್ಯದ ಕೊರತೆಯಂತಹ ಸವಾಲುಗಳನ್ನು ಎದುರಿಸುತ್ತಿರುವ ಯುವಜನತೆಗೆ ಮುಂಬರುವ ಕೇಂದ್ರ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ.
ಯುವಜನತೆಯ ಸಲಹೆಗಳಿಗೆ ಕೇಂದ್ರ ಸರ್ಕಾರ ಎಷ್ಟರಮಟ್ಟಿಗೆ ಸ್ಪಂದಿಸಲಿದೆ? ಹೊಸ ಉದ್ಯೋಗ ಯೋಜನೆಗಳು ಘೋಷಣೆಯಾಗುತ್ತಾ? ಇಂಟರ್ನ್ಶಿಪ್ ಯೋಜನೆಗೆ ಹೊಸ ರೂಪ ಸಿಗುತ್ತಾ? ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಸೂಟ್ಕೇಸ್ನಲ್ಲಿ ಯುವಜನತೆಗಾಗಿ ಏನೆಲ್ಲಾ ಇರಲಿದೆ ಎಂಬುದನ್ನು ಕಾದು ನೋಡಬೇಕಿದೆ.