ಸ್ಟಿಂಗ್ ಆಪರೇಷನ್ ಕೇಸ್ ಕೃಪಾ ಆಳ್ವಾ ಮೊಬೈಲ್, ಧ್ವನಿ ಮಾದರಿ ಎಫ್ಎಸ್ಎಲ್ಗೆ!!
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ಸೈಬರ್ ಕ್ರೈಂ ಪೊಲೀಸರು ಚುರುಕುಗೊಳಿಸಿದ್ದಾರೆ. ಕೃಪಾ ಆಳ್ವಾ ಹಸ್ತಾಂತರಿಸಿದ ಮೊಬೈಲ್ ಹಾಗೂ ಅವರ ಧ್ವನಿ ಮಾದರಿಯನ್ನು ಪರಿಶೀಲನೆಗಾಗಿ ಎಫ್ಎಸ್ಎಲ್ಗೆ ರವಾನಿಸಲಾಗಿದೆ. ಪ್ರಕರಣದ ತನಿಖೆ ಮೂರು ಬಾರಿ ವಿಚಾರಣೆಗೆ ಹಾಜರಾಗಿದ್ದ ಕೃಪಾ ಮೊಬೈಲ್ ಕೊಡಲು ಹಿಂದೇಟು ಹಾಕಿದ್ದರು ಎಂಬುದಿಲ್ಲಿ ಗಮನಾರ್ಹ.
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕೇಸ್ ಸಂಬಂಧ ಸೈಬರ್ ಕ್ರೈಂ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸರು ಕೇಳಿದ್ದ ಮೊಬೈಲ್ನ ಕೊನೆಗೂ ತನಿಖಾಧಿಕಾರಿ ಎಸಿಪಿ ರವಿಗೆ ಕೃಪಾ ಆಳ್ವಾ ನೀಡಿದ್ದು, ಅದನ್ನು ಸೀಜ್ ಮಾಡಿ ಪರಿಶೀಲನೆ ನಡೆಸಲಾಗ್ತಿದೆ. ಸ್ಟಿಂಗ್ ವಿಡಿಯೋ ರೆಕಾರ್ಡ್ ಆಗಿದ್ದ ವೇಳೆ ಈ ಮೊಬೈಲ್ ಬಳಕೆಯಾಗಿತ್ತು ಎನ್ನಲಾಗಿದೆ. ಈ ಹಿಂದೆ ವಿಚಾರಣೆ ಸಂದರ್ಭವೇ ಮೊಬೈಲ್ ಹಸ್ತಾಂತರಿಸುವಂತೆ ಪೊಲೀಸರು ಕೃಪಾ ಆಳ್ವಾಗೆ ಖಡಕ್ ಸೂಚನೆ ನೀಡಿದ್ದರು.
ಇನ್ನು ಕೃಪಾ ಆಳ್ವಾ ನೀಡಿರುವ ಮೊಬೈಲ್ನಲ್ಲಿ ಸಾಕಷ್ಟು ಪೈಲ್ಸ್ ಡಿಲೀಟ್ ಆಗಿರೋ ಅನುಮಾನ ಹಿನ್ನಲೆ ಅದನ್ನು ಎಫ್ಎಸ್ಎಲ್ಗೆ ರವಾನಿಸಲು ಸೈಬರ್ ಕ್ರೈಂ ಪೊಲೀಸರು ಮುಂದಾಗಿದ್ದಾರೆ.

ಪ್ರಕರಣದ ತನಿಖೆ ಮೂರು ಬಾರಿ ವಿಚಾರಣೆಗೆ ಹಾಜರಾಗಿದ್ದ ಕೃಪಾ ಮೊಬೈಲ್ ಕೊಡಲು ಹಿಂದೇಟು ಹಾಕಿದ್ದರು. ಇನ್ನು ಮತ್ತೊಂದೆಡೆ ಕೃಪಾ ಆಳ್ವಾ ಧ್ವನಿ ಮಾದರಿಯನ್ನೂ ಪೊಲೀಸರು ಪಡೆದಿದ್ದು, ವಿಡಿಯೋದಲ್ಲಿದ್ದ ಕೃಪಾ ಧ್ವನಿಗೆ ಅದನ್ನು ಮ್ಯಾಚ್ ಮಾಡಲು ತಯಾರಿ ನಡೆಸಿದ್ದಾರೆ. ಆ ಕಾರಣಕ್ಕೆ ಧ್ವನಿ ಮಾದರಿಯನ್ನೂ ಎಫ್ಎಸ್ಎಲ್ಗೆ ರವಾನಿಸಿದ್ದಾರೆ.
2023ರ ಫೆಬ್ರವರಿಯಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾದ ಮತ್ತು 2026ರ ಸೆಪ್ಟೆಂಬರ್ನಲ್ಲಿ ಯೂಟ್ಯೂಬ್ನಲ್ಲಿ ಅಪ್ಲೋಡ್ ಆದ ವಿಡಿಯೋದಲ್ಲಿ ಕೃಪಾ ಆಳ್ವಾ ಹಾಗೂ ಖಾಸಗಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಕಾಣಿಸಿಕೊಂಡಿದ್ದರು. ಹೀಗಾಗಿ ಈ ಸ್ಟಿಂಗ್ ಆಪರೇಷನ್ ಷಡ್ಯಂತ್ರದ ಹಿಂದೆ ಇವರಿಬ್ಬರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಪಕ್ಷವಿರೋಧಿ ಚಟುವಟಿಕೆ ಮತ್ತು ಈ ವಿವಾದದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಕೃಪಾ ಆಳ್ವಾರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿತ್ತು.

ಆದರೆ ವಿಚಾರಣೆ ವೇಳೆ ತಾವು ನಿರಪರಾಧಿ ಎಂದು ಹೇಳಿಕೊಂಡಿರುವ ಕೃಪಾ ಆಳ್ವಾ, ಸ್ಟಿಂಗ್ ವಿಡಿಯೋ ವಿಚಾರವಾಗಿ ರಾಕೇಶ್ ಶೆಟ್ಟಿ ತಮ್ಮನ್ನು ಸಂಪರ್ಕಿಸಿದ್ದರು ಎಂದಿದ್ದರು. ಪ್ರಕರಣ ಸಂಬಂಧ ಕೃಪಾ ಆಳ್ವಾ ಅದಾಗಲೇ ಮೂರು ಬಾರಿ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದರು.
ಏನಿದು ಸ್ಟಿಂಗ್ ಆಪರೇಷನ್ ಪ್ರಕರಣ?ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು.

ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾದ ವಿವಾದಾತ್ಮಕ ವಿಡಿಯೋದಲ್ಲಿ ಕಾಂಗ್ರೆಸ್ನ ಉಚ್ಛಾಟಿತ ನಾಯಕಿ ಕೃಪಾ ಆಳ್ವಾ ಹಾಗೂ ಖಾಸಗಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರು ಕಾಣಿಸಿಕೊಂಡಿದ್ದರು.
ಈ ಸ್ಟಿಂಗ್ ಆಪರೇಷನ್ ಹಿಂದೆ ಕೃಪಾ ಆಳ್ವಾ ಅವರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು. ವಿವಾದ ಹಾಗೂ ಪಕ್ಷವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿತ್ತು.
ಮೂರು ಬಾರಿ ಸಿಸಿಬಿ ವಿಚಾರಣೆ
ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರು ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಕೃಪಾ ಆಳ್ವಾ ಅವರನ್ನು ಈಗಾಗಲೇ ಮೂರು ಬಾರಿ ವಿಚಾರಣೆಗೆ ಒಳಪಡಿಸಿದ್ದಾರೆ.
ಸ್ಟಿಂಗ್ ಆಪರೇಷನ್ಗೆ ಬಳಸಲಾಗಿದೆ ಎನ್ನಲಾದ ಹಳೆಯ ಮೊಬೈಲ್ ಹಾಗೂ ಪ್ರಸ್ತುತ ಬಳಸುತ್ತಿರುವ ಮೊಬೈಲ್ ಹಸ್ತಾಂತರಿಸುವಂತೆ ಪೊಲೀಸರು ಸೂಚಿಸಿದ್ದರು. ಎಡಿಟ್ ಮಾಡದ ಮೂಲ ವಿಡಿಯೋವನ್ನು ಸಂಗ್ರಹಿಸಲು ತನಿಖಾಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ
ಆರೋಪಗಳನ್ನು ತಳ್ಳಿಹಾಕಿರುವ ಕೃಪಾ ಆಳ್ವಾ
ತಾವು ಯಾವುದೇ ಸ್ಟಿಂಗ್ ಆಪರೇಷನ್ ಮಾಡಿಸಿಲ್ಲ ಎಂದು ಕೃಪಾ ಆಳ್ವಾ ವಿಚಾರಣೆ ವೇಳೆ ತಿಳಿಸಿದ್ದಾರೆ ಎನ್ನಲಾಗಿದೆ.
ಘಟನೆ ನಡೆದ ಸಂದರ್ಭದಲ್ಲಿ ತಾವು ಅಲ್ಲಿದ್ದದ್ದು ನಿಜ. ಆದರೆ ರಹಸ್ಯವಾಗಿ ವಿಡಿಯೋ ಚಿತ್ರೀಕರಣ ಮಾಡುತ್ತಿರುವ ಬಗ್ಗೆ ತಮಗೆ ತಿಳಿದಿರಲಿಲ್ಲ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದರಲ್ಲಿಯೂ ತಮ್ಮ ಪಾತ್ರವಿಲ್ಲ ಎಂಬ ವಾದ ಮಂಡಿಸಿದ್ದಾರೆ.
ಅಲ್ಲದೆ, ಅಂದಿನ ಮೊಬೈಲ್ ಬದಲಾಯಿಸಿರುವುದಾಗಿಯೂ ಪೊಲೀಸರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.