ತಮಿಳುನಾಡಿನ ದೀಪಂ ವಿವಾದಕ್ಕೆ ಸುಪ್ರೀಂ ಕೋರ್ಟ್ ಎಂಟ್ರಿ! ನ್ಯಾಯಾಲಯದ ಆದೇಶ ಉಲ್ಲಂಘನೆಯಾಯಿತೇ?
ತಮಿಳುನಾಡಿನ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಧಾರ್ಮಿಕ ದೀಪ ಬೆಳಗಿಸುವ ವಿಚಾರ ಇದೀಗ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಸುಪ್ರೀಂ ಕೋರ್ಟ್ ಆದೇಶವಿದ್ದರೂ ನಿಗದಿತ ಸ್ಥಳದಲ್ಲಿ ದೀಪ ಬೆಳಗಿಸಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ಈಗ ಮತ್ತೊಂದು ಕಾನೂನು ಸಂಘರ್ಷಕ್ಕೆ ತಿರುಗಿದೆ.
ಮಧುರೈನ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿರುವ ‘ದೀಪತ್ತೂನ್’ ಎಂಬ ಕಲ್ಲಿನ ಸ್ತಂಭದ ಮೇಲೆ ಕಾರ್ತಿಗೈ ದೀಪಂ ಬೆಳಗಿಸುವಂತೆ ಸುಪ್ರೀಂ ಕೋರ್ಟ್ ನವೆಂಬರ್ 20ರಂದು ಮಧ್ಯಂತರ ಆದೇಶ ನೀಡಿತ್ತು. ಅದರಂತೆ ನವೆಂಬರ್ 24ರಂದು ದೀಪ ಬೆಳಗಿಸಲು ಅವಕಾಶ ಕಲ್ಪಿಸಲಾಗಿತ್ತು.
ಆದರೆ ಮಂಗಳವಾರ ನಡೆದ ಧಾರ್ಮಿಕ ಆಚರಣೆಯಲ್ಲಿ ಬೆಟ್ಟದ ಮೇಲಿರುವ ವಿವಾದಿತ ದೀಪತ್ತೂನ್ ಸ್ತಂಭದ ಬದಲಿಗೆ, ಉಚ್ಚಿ ಪಿಳ್ಳೈಯಾರ್ ದೇವಸ್ಥಾನದ ಸಮೀಪವಿರುವ ಸಾಂಪ್ರದಾಯಿಕ ಸ್ಥಳದಲ್ಲಷ್ಟೇ ದೀಪ ಬೆಳಗಿಸಲಾಯಿತು. ಇದರಿಂದ ವಿವಾದ ಮತ್ತಷ್ಟು ತೀವ್ರಗೊಂಡಿದೆ.

ಈ ವಿಚಾರವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಸ್ತಾಪಿಸಿದ ಹಿಂದೂ ಭಕ್ತರ ಪರ ವಕೀಲರು, ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದೆ, ವಿವಿಧ ತಂತ್ರಗಳ ಮೂಲಕ ಅದನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಈಗಾಗಲೇ ಬೆಳಗಿಸಿರುವ ದೀಪದ ಜ್ಯೋತಿಯನ್ನು ವಿವಾದಿತ ದೀಪತ್ತೂನ್ ಸ್ತಂಭದ ಬಳಿಗೆ ಕೊಂಡೊಯ್ದು ಅಲ್ಲಿ ದೀಪ ಬೆಳಗಿಸಬೇಕಿತ್ತು ಎಂದು ವಾದಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ಸೂಕ್ತ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ. ಅರ್ಜಿ ಸಲ್ಲಿಕೆಯಾದ ಬಳಿಕ ಸೂಕ್ತ ಆದೇಶ ನೀಡುವುದಾಗಿ ತಿಳಿಸಿದೆ.ಇನ್ನೊಂದೆಡೆ, ಮಧುರೈ ಜಿಲ್ಲಾಧಿಕಾರಿ ನಿಶಾಂತ್ ಕೃಷ್ಣ ಅವರು ಸುಪ್ರೀಂ ಕೋರ್ಟ್ಗೆ ವರದಿ ಸಲ್ಲಿಸಿದ್ದು,

ದೇವಸ್ಥಾನದ ಆಡಳಿತ ಮಂಡಳಿ ಅನುಮತಿ ನೀಡದ ಕಾರಣ ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ, ದೀಪ ಬೆಳಗಿಸಲು ಸಾಧ್ಯವಾಗದಿದ್ದಕ್ಕೆ ಕ್ಷಮೆಯನ್ನೂ ಕೋರಿದ್ದಾರೆ.
ಈ ಪ್ರಕರಣದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆಯಾಗಿದೆಯೇ? ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲಾಗುತ್ತದೆಯೇ? ಎಂಬ ಪ್ರಶ್ನೆಗಳು ಈಗ ಕುತೂಹಲ ಮೂಡಿಸಿವೆ. ಪ್ರಕರಣದ ಮುಂದಿನ ವಿಚಾರಣೆ ಮತ್ತು ಸುಪ್ರೀಂ ಕೋರ್ಟ್ನ ನಿರ್ಧಾರದ ಮೇಲೆ ಎಲ್ಲರ ಗಮನ ನೆಟ್ಟಿದೆ.