‘ಸಹಿ ಮಾಡಿ ಲಿಖಿತ ಭರವಸೆ ಕೊಡಿ ಅಂದ್ರೆ ಕೊಡಲ್ಲ’; ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿಕೆಶಿ ಖಡಕ್ ಸಂದೇಶ!
ಆಶಾ ಕಾರ್ಯಕರ್ತೆಯರ ಹೋರಾಟದ ವಿಚಾರದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಖಡಕ್ ನಿಲುವು ತಾಳಿದ್ದಾರೆ. ಸರ್ಕಾರದ ಭರವಸೆಯನ್ನು ನಂಬಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿರುವ ಸಿಎಂ, ಲಿಖಿತ ಭರವಸೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಆಶಾ ಕಾರ್ಯಕರ್ತೆಯರು ಯಾರ ವಿರುದ್ಧ ಹೋರಾಟ ಮಾಡಬೇಕು ಎಂಬ ಬಗ್ಗೆಯೂ ಮಾತನಾಡಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.ಭರವಸೆ ಕೊಟ್ಟಿದ್ದೇನೆ, ಸಹಿ ಮಾಡಿ ಕೊಡಲ್ಲ!
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ‘ನಾನು ಈಗಾಗಲೇ ಆಶಾ ಕಾರ್ಯಕರ್ತೆಯರಿಗೆ ಭರವಸೆ ಕೊಟ್ಟಿದ್ದೇನೆ. ನಮ್ಮ ಸರ್ಕಾರವನ್ನು ನಂಬಿ ಅಂತ ಹೇಳಿದ್ದೇನೆ. ಅದನ್ನು ಬಿಟ್ಟು ಸಹಿ ಮಾಡಿ, ಲಿಖಿತ ಭರವಸೆ ಕೊಡಿ ಅಂದ್ರೆ ನಾನು ಕೊಡಲ್ಲ’ ಎಂದು ಖಡಕ್ಕಾಗಿ ಹೇಳಿದ್ದಾರೆ.
ಪ್ರತಿಭಟನೆ ಕೈಬಿಟ್ಟು ತಮ್ಮ ಸೇವೆಗೆ ಮರಳುವಂತೆ ಆಶಾ ಕಾರ್ಯಕರ್ತೆಯರಿಗೆ ಸಲಹೆ ನೀಡಿದ್ದಾರೆ.ಹೋರಾಟ ಮಾಡಬೇಕಿರೋದು ಕೇಂದ್ರ ಸರ್ಕಾರದ ವಿರುದ್ಧ!
ಆಶಾ ಕಾರ್ಯಕರ್ತೆಯರ ಬೇಡಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧವೂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಇನ್ನಷ್ಟು ನೆರವು ನೀಡಿಲ್ಲ. ನೀವು ಹೋರಾಟ ಮಾಡುವುದಾದರೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಿ ಎಂದು ಹೇಳಿದ್ದಾರೆ.
ಸಿಎಂಗೆ ಕರೆ ಮಾಡಿದ ಆಶಾ ಕಾರ್ಯಕರ್ತೆಯರು ಹೇಳಿದ್ದೇನು?ಹಲವು ಆಶಾ ಕಾರ್ಯಕರ್ತೆಯರು ತಮಗೆ ಕರೆ ಮಾಡಿರುವುದಾಗಿಯೂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
‘ಅಣ್ಣಾ, ನಿಮ್ಮ ಮೇಲೆ ನಂಬಿಕೆಯಿದೆ. ಪ್ರತಿಭಟನೆ ವಾಪಸ್ ಪಡೆಯುತ್ತೇವೆ. ನಮ್ಮನ್ನು ಕಳಿಸಿಕೊಡಿ, ನಾವು ಸೇವೆ ಮಾಡಲು ಸಿದ್ಧರಿದ್ದೇವೆ ಎಂದು ಹಲವರು ಹೇಳಿದ್ದಾರೆ. ಅವರ ನಡುವೆ ಭಿನ್ನಾಭಿಪ್ರಾಯ ಮೂಡಬಾರದು ಎಂಬ ಕಾರಣಕ್ಕೆ ಈ ವಿಚಾರವನ್ನು ಬಹಿರಂಗಪಡಿಸಿರಲಿಲ್ಲ’ ಎಂದಿದ್ದಾರೆ.
ಕುಮಾರಸ್ವಾಮಿಗೂ ತಿರುಗೇಟು ಕೊಟ್ಟ ಡಿಕೆಶಿ!ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಿದ್ದ ಭರವಸೆ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಸ್ತಾಪಿಸಿದ್ದಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ.
‘ನಾವು ಪ್ರಣಾಳಿಕೆಯಲ್ಲಿ ಹಾಕಿದ್ದರೆ ಅದನ್ನು ನೆರವೇರಿಸುತ್ತೇವೆ. ಅವರಿಂದ ನಾವು ಕಲಿಯಬೇಕಿಲ್ಲ. ಹಲವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಯಾರಿಗೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಹೇಳಿದ್ದಾರೆ.ಸಿಎಂ ಮಾತಿಗೆ ಮಣಿಯುತ್ತಾರಾ ಆಶಾ ಕಾರ್ಯಕರ್ತೆಯರು?
ಒಂದೆಡೆ ಲಿಖಿತ ಭರವಸೆಗಾಗಿ ಪಟ್ಟು ಹಿಡಿದಿರುವ ಆಶಾ ಕಾರ್ಯಕರ್ತೆಯರು, ಮತ್ತೊಂದೆಡೆ ಸರ್ಕಾರದ ಮಾತನ್ನು ನಂಬುವಂತೆ ಮನವಿ ಮಾಡುತ್ತಿರುವ ಮುಖ್ಯಮಂತ್ರಿ. ಇದೀಗ ಲಿಖಿತ ಭರವಸೆ ನೀಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರ ಮುಂದಿನ ನಡೆ ಏನಾಗಲಿದೆ ಎಂಬ ಕುತೂಹಲ ಮೂಡಿದೆ.
ಸಿಎಂ ಮಾತನ್ನು ನಂಬಿ ಪ್ರತಿಭಟನೆ ವಾಪಸ್ ಪಡೆಯುತ್ತಾರಾ? ಅಥವಾ ಲಿಖಿತ ಭರವಸೆ ಸಿಗುವವರೆಗೂ ಹೋರಾಟ ಮುಂದುವರಿಸುತ್ತಾರಾ? ಎಂಬುದನ್ನು ಕಾದುನೋಡಬೇಕಿದೆ.