ವಿನಯ್ ಕುಲಕರ್ಣಿ ಜಾಮೀನು ರದ್ದು 2 ವಾರಗಳಲ್ಲಿ ಶರಣಾಗಲು ಸುಪ್ರೀಂಕೋರ್ಟ್​ ಸೂಚನೆ

ವಿನಯ್ ಕುಲಕರ್ಣಿ ಜಾಮೀನು ರದ್ದು 2 ವಾರಗಳಲ್ಲಿ ಶರಣಾಗಲು ಸುಪ್ರೀಂಕೋರ್ಟ್​ ಸೂಚನೆ

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸ್​ನಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಯ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್​ ಮಹತ್ವದ ಆದೇಶ ನೀಡಿದೆ.
ಹೈಕೋರ್ಟ್​ ನೀಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಸಿಬಿಐ ಮತ್ತು ಮೃತರ ಸಹೋದರ ಸಲ್ಲಿಸಿದ ಮೇಲ್ಮನವಿ ಸಂಬಂಧ ತೀರ್ಪು ಪ್ರಕಟವಾಗಿದೆ. ಶಾಸಕ ಸ್ಥಾನದಿಂದಲೂ ವಿನಯ್ ಕುಲಕರ್ಣಿ ಅನರ್ಹರಾಗಿದ್ದಾರೆ.

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಹೈಕೋರ್ಟ್ ನೀಡಿರುವ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸಿಬಿಐಮತ್ತು ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೇ ಪ್ರಕರಣದಲ್ಲೀಗ ವಿನಯ್ ಜಾಮೀನು ರದ್ದು ಮಾಡಿ
ಸುಪ್ರೀಂಕೋರ್ಟ್​ ಮಹತ್ವದ ತೀರ್ಪು ನೀಡಿದೆ.ಶಾಸಕ ಸ್ಥಾನದಿಂದಲೂ ವಿನಯ್ ಕುಲಕರ್ಣಿ ಅನರ್ಹರಾಗಿದ್ದಾರೆ.

ಸುಪ್ರೀಂ ಕೋರ್ಟ್​ ನೀಡಿದ ಆದೇಶದಲ್ಲೆನಿದೆ?ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹಾಗೂ ಕೊಲೆಯಾದ ಯೋಗೇಶ್ ಗೌಡ ಅವರ ಸಹೋದರ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಅರ್ಜಿಗಳ ವಿಚಾರಣೆ ಬಳಿಕ ನ್ಯಾ.ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ನೀಡಿದ್ದು, ಜಾಮೀನು ರದ್ದು ಮಾಡಿದೆ. 2 ವಾರದಲ್ಲಿ ಶರಣಾಗಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದ ಹಿನ್ನೆಲೆ2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್‌ನಲ್ಲಿ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಅವರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿತ್ತು.
ಆರಂಭದಲ್ಲಿ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಳಿಕ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಸಿಬಿಐ, ಕೊಲೆಯ ಹಿಂದೆ ರಾಜಕೀಯ ದ್ವೇಷ ಹಾಗೂ ಸಂಚಿನ ಆರೋಪಗಳನ್ನು ಮುಂದಿಟ್ಟಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ.

2026ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು, ಇದೇ ವರ್ಷದ ಜುಲೈ 31ರಂದು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶ್ ಗೌಡ ಅವರ ಸಹೋದರ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು.

ಅಕ್ಟೋಬರ್ 27ರಂದು ಎರಡೂ ಕಡೆಯ ವಾದ ಆಲಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯದ ಅಂತಿಮ ಆದೇಶ ಹೊರಬಿದ್ದಿದ್ದು,

2016ರ ಜೂನ್ 15ರಂದು ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು.

ಯೋಗೇಶ್ ಗೌಡ ಹಾಗೂ ವಿನಯ್ ಕುಲಕರ್ಣಿ ನಡುವೆ ರಾಜಕೀಯ ವೈಷಮ್ಯವಿತ್ತು ಎಂಬ ಆರೋಪ ಕೇಳಿಬಂದಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರು. ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಯೋಗೇಶ್ ಗೌಡ ಕುಟುಂಬಸ್ಥರು ಒತ್ತಾಯಿಸಿದ್ದರು.

2019ರಲ್ಲಿ ಸಿಬಿಐಗೆ ತನಿಖೆ ಹಸ್ತಾಂತರ2019ರಲ್ಲಿ ರಾಜ್ಯ ಸರ್ಕಾರ ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಕೈಗೊಂಡ ಸಿಬಿಐ ಹಲವು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಆರೋಪಿಸಿತ್ತು.

2020ರ ನವೆಂಬರ್ 5ರಂದು ಸಿಬಿಐ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು. ವಿನಯ್ ಕುಲಕರ್ಣಿ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದರು.

2021ರ ಆಗಸ್ಟ್‌ನಲ್ಲಿ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು.

ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ವಿನಯ್ ಕುಲಕರ್ಣಿ ಪ್ರಕರಣದ ಸಾಕ್ಷಿಗಳನ್ನು ಸಂಪರ್ಕಿಸಲು ಹಾಗೂ ಅವರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಪ್ರೀಂಕೋರ್ಟ್ 2025ರ ಜೂನ್ 6ರಂದು ಅವರ ಜಾಮೀನನ್ನು ರದ್ದುಗೊಳಿಸಿತ್ತು. ಒಂದು ವಾರದೊಳಗೆ ಶರಣಾಗುವಂತೆ ಸೂಚಿಸಿತ್ತು.

ಶರಣಾಗಲು ಹೆಚ್ಚಿನ ಕಾಲಾವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು.

ಆದರೆ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ 2026ರ ಫೆಬ್ರವರಿ 27ರಂದು ಮತ್ತೆ ಜಾಮೀನು ಮಂಜೂರಾಗಿತ್ತು

Leave a Reply

Your email address will not be published. Required fields are marked *