ಯೂಟ್ಯೂಬರ್ ವಿರುದ್ಧ ಖ್ಯಾತ ನಟ ಅರ್ಜುನ್ ಸರ್ಜಾ ದೂರು ದಾಖಲು! ಮಗಳ ವಿರುದ್ಧದ ಅಪಪ್ರಚಾರಕ್ಕೆ ಕಿಡಿ!!
ಕುಟುಂಬದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಟೀಕೆಗಳು ಇದೀಗ ಕಾನೂನು ಸಂಘರ್ಷಕ್ಕೆ ಕಾರಣವಾಗಿವೆ.
ಕುಟುಂಬದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಟೀಕೆಗಳು ಇದೀಗ ಕಾನೂನು ಸಂಘರ್ಷಕ್ಕೆ ಕಾರಣವಾಗಿವೆ. ಖ್ಯಾತ ನಟ ಅರ್ಜುನ್ ಸರ್ಜಾ ತಮ್ಮ ಮಗಳ ವಿರುದ್ಧ ಆಧಾರರಹಿತ ಆರೋಪಗಳು ಮತ್ತು ಅಪಪ್ರಚಾರ ಮಾಡಲಾಗುತ್ತಿದೆ ಎಂದು ದೂರಿದ್ದಾರೆ. ಈ ಸಂಬಂಧ ಚೆನ್ನೈ ಪೊಲೀಸ್ ಆಯುಕ್ತರ ಕಚೇರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಖ್ಯಾತ ಯೂಟ್ಯೂಬರ್ ಹಾಗೂ ಸಿನಿಮಾ ವಿಮರ್ಶಕ ಪೈಲ್ವಾನ್ ರಂಗನಾಥನ್ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ನಟ ಅರ್ಜುನ್ ಸರ್ಜಾ ಕಿರಿಯ ಮಗಳು ಅಂಜನಾ ಮದುವೆಗೆ ಹಿರಿಯ ಮಗಳು ಐಶ್ವರ್ಯಾ ಕುಟುಂಬದವರು ಹಾಜರಾಗಿರಲಿಲ್ಲ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿತ್ತು. ಈ ವಿಷಯವನ್ನು ಮುಂದಿಟ್ಟುಕೊಂಡು ಕೆಲವರು ವಿವಿಧ ರೀತಿಯ ವಿಡಿಯೋಗಳನ್ನು ಪ್ರಕಟಿಸಿದ್ದರು. ಕುಟುಂಬದ ಖಾಸಗಿ ವಿಚಾರವನ್ನು ಆಧರಿಸಿ ಟೀಕೆಗಳನ್ನು ಮಾಡಲಾಗಿತ್ತು. ಈ ವಿಡಿಯೋಗಳು ಮತ್ತು ಹೇಳಿಕೆಗಳು ಇದೀಗ ವಿವಾದಕ್ಕೆ ಕಾರಣವಾಗಿವೆ.
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಕುಟುಂಬದ ಬಗ್ಗೆ ಆಧಾರರಹಿತ ಮಾಹಿತಿಯನ್ನು ಹರಡಲಾಗುತ್ತಿದೆ. ಇದರಿಂದ ತಮ್ಮ ಮತ್ತು ಕುಟುಂಬದ ಸದಸ್ಯರ ಗೌರವಕ್ಕೆ ಧಕ್ಕೆಯಾಗುತ್ತಿದೆ ಎಂದು ನಟ ಅರ್ಜುನ್ ಆರೋಪಿಸಿದ್ದಾರೆ. ಈ ಸಂಬಂಧ ಅವರು ಚೆನ್ನೈ ಮೆಟ್ರೋಪಾಲಿಟನ್ ಪೊಲೀಸ್ ಆಯುಕ್ತರ ಕಚೇರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ. ತಮ್ಮ ಮಗಳ ವೈಯಕ್ತಿಕ ಜೀವನದ ಕುರಿತು ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ಅವರ ದೂರಿನ ಮುಖ್ಯ ಉದ್ದೇಶವಾಗಿದೆ.
ಪೈಲ್ವಾನ್ ರಂಗನಾಥನ್ ವಿರುದ್ಧ ಪ್ರಕರಣ ದಾಖಲು
ನಟ ಅರ್ಜುನ್ ನೀಡಿದ ದೂರಿನ ಆಧಾರದ ಮೇಲೆ ಯೂಟ್ಯೂಬರ್ ಹಾಗೂ ಸಿನಿಮಾ ವಿಮರ್ಶಕ ಪೈಲ್ವಾನ್ ರಂಗನಾಥನ್ ಮತ್ತು ಮತ್ತೊಬ್ಬ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿಸಿದ ಸೆಕ್ಷನ್ ಸೇರಿದಂತೆ ಮೂರು ಕಾನೂನು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸೈಬರ್ ಕ್ರೈಂ ಪೊಲೀಸರಿಂದ ವಿಚಾರಣೆ
ಪ್ರಕರಣ ದಾಖಲಾದ ಬೆನ್ನಲ್ಲೇ ಪೈಲ್ವಾನ್ ರಂಗನಾಥನ್ ಅವರನ್ನು ಚೆನ್ನೈನ ವೆಪೇರಿಯಲ್ಲಿರುವ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸೈಬರ್ ಅಪರಾಧ ವಿಭಾಗದ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾದ ವಿಡಿಯೋಗಳು, ಅವುಗಳಲ್ಲಿನ ಹೇಳಿಕೆಗಳು ಮತ್ತು ಆರೋಪಗಳಿಗೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎನ್ನಲಾಗಿದೆ.
ಅಪಪ್ರಚಾರ ಮಾಡಿದವರ ವಿರುದ್ಧವೂ ತನಿಖೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕಾರಕ ಮಾಹಿತಿ ಹರಡಿದ ಇತರ ವ್ಯಕ್ತಿಗಳನ್ನೂ ವಿಚಾರಣೆಗೆ ಒಳಪಡಿಸಲು ಪೊಲೀಸರು ಯೋಜಿಸುತ್ತಿದ್ದಾರೆ ಎಂದು ವರದಿಯಾಗಿದೆ. ವಿಡಿಯೋಗಳ ಮೂಲ, ಅವುಗಳನ್ನು ಪ್ರಕಟಿಸಿದವರ ಉದ್ದೇಶ ಮತ್ತು ಆರೋಪಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಸಾಧ್ಯತೆಯಿದೆ.
ಒಟ್ಟಿನಲ್ಲಿ, ನಟ ಅರ್ಜುನ್ ಸರ್ಜಾ ನೀಡಿರುವ ದೂರಿನಿಂದ ಆರಂಭವಾದ ಈ ವಿವಾದ ಇದೀಗ ಪೊಲೀಸ್ ತನಿಖೆಯ ಹಂತ ತಲುಪಿದ್ದು, ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿಸಿದೆ.
ಅಪಪ್ರಚಾರ ಶುರುವಾಗಿದ್ದು ಹೇಗೆ?
ಕಳೆದ ಅಕ್ಟೋಬರ್ನಲ್ಲಿ ಅರ್ಜುನ್ ಸರ್ಜಾ ಅವರ ಕಿರಿಯ ಪುತ್ರಿ ಅಂಜನಾ ಅವರ ವಿವಾಹ ಇಟಲಿಯಲ್ಲಿ ಅದ್ದೂರಿಯಾಗಿ ನೆರವೇರಿತ್ತು. ಈ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಆದರೆ ಮದುವೆ ಸಮಾರಂಭದಲ್ಲಿ ಹಿರಿಯ ಪುತ್ರಿ ಐಶ್ವರ್ಯಾ ಅವರ ಪತಿ ಉಮಾಪತಿ ರಾಮಯ್ಯ ಕಾಣಿಸಿಕೊಂಡಿರಲಿಲ್ಲ ಎನ್ನುವ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕೆಲವರು ಐಶ್ವರ್ಯಾ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳನ್ನು ಹಬ್ಬಿಸಿದ್ದರು.
ಅಷ್ಟೇ ಅಲ್ಲದೆ, ಐಶ್ವರ್ಯಾ ಅವರ ವೈಯಕ್ತಿಕ ಜೀವನ ಹಾಗೂ ಜೀವನಶೈಲಿಯ ಕುರಿತಾಗಿಯೂ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಲಾಗಿತ್ತು. ಈ ಆರೋಪಗಳನ್ನು ಅರ್ಜುನ್ ಸರ್ಜಾ ತಳ್ಳಿಹಾಕಿದ್ದಾರೆ.
ಇದು ನನ್ನ ಮಗಳ ವಿಚಾರ ಮಾತ್ರವಲ್ಲ!
ತಮ್ಮ ಹೋರಾಟ ಕೇವಲ ಮಗಳಿಗಾಗಿ ಮಾತ್ರವಲ್ಲ, ಸಮಾಜದಲ್ಲಿ ಗೌರವದಿಂದ ಬದುಕಲು ಬಯಸುವ ಪ್ರತಿಯೊಬ್ಬ ಮಹಿಳೆಗಾಗಿ ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ.
ಮಹಿಳೆಯರ ವೈಯಕ್ತಿಕ ನಿರ್ಧಾರಗಳನ್ನು ಪ್ರಶ್ನಿಸುವುದು, ಅವರ ಚಾರಿತ್ರ್ಯದ ಬಗ್ಗೆ ಆಧಾರವಿಲ್ಲದೆ ಆರೋಪ ಮಾಡುವುದು ಅತ್ಯಂತ ಬೇಜವಾಬ್ದಾರಿಯ ವರ್ತನೆ. ತಂದೆಯಾಗಿ ಮಗಳ ಸ್ವಾತಂತ್ರ್ಯ, ಗೌರವ ಮತ್ತು ಹಕ್ಕುಗಳ ಪರವಾಗಿ ಸದಾ ನಿಲ್ಲುವುದಾಗಿ ತಿಳಿಸಿದ್ದಾರೆ
2024ರಲ್ಲಿ ಐಶ್ವರ್ಯಾ ಅದ್ದೂರಿ ವಿವಾಹ!
ಅರ್ಜುನ್ ಸರ್ಜಾ ಅವರ ಹಿರಿಯ ಪುತ್ರಿ ಐಶ್ವರ್ಯಾ ಅರ್ಜುನ್ ಹಾಗೂ ತಮಿಳು ನಟ ಉಮಾಪತಿ ರಾಮಯ್ಯ 2021ರಲ್ಲಿ ಸರ್ವೈವರ್ ತಮಿಳು ರಿಯಾಲಿಟಿ ಶೋ ಮೂಲಕ ಪರಿಚಯವಾಗಿದ್ದರು. ನಂತರ ಇಬ್ಬರ ನಡುವೆ ಪ್ರೀತಿ ಮೂಡಿತ್ತು.
2023ರ ಅಕ್ಟೋಬರ್ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ, 2024ರ ಜೂನ್ 10ರಂದು ಚೆನ್ನೈನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಇವರ ವಿವಾಹ ಸಮಾರಂಭದಲ್ಲಿ ರಜನಿಕಾಂತ್ ಸೇರಿದಂತೆ ಹಲವು ಚಿತ್ರರಂಗದ ಗಣ್ಯರು ಭಾಗವಹಿಸಿದ್ದರು.