ಜೈಲಿನ ವಿಡಿಯೋ ಲೀಕ್ ಕೇಸ್‌ನಲ್ಲಿ ನಟ ಧನ್ವೀರ್‌ಗೆ ಸಂಕಷ್ಟ! ನವೆಂಬರ್ 30ಕ್ಕೆ ಹಾಜರಾಗಲೇಬೇಕು; ಹೈಕೋರ್ಟ್ ಖಡಕ್ ಸೂಚನೆ!
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಡಿಯೋ ಸೋರಿಕೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ಧನ್ವೀರ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ ಎಂಬ ಆರೋಪದ ಬೆನ್ನಲ್ಲೇ ಹೈಕೋರ್ಟ್ ಇದೀಗ ನಟನಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ನವೆಂಬರ್ 30ರಂದು ಬೆಳಗ್ಗೆ 11 ಗಂಟೆಗೆ ತಪ್ಪದೇ ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿದೆ.
ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ನಟ ಧನ್ವೀರ್ ವಿರುದ್ಧ ಈ ಹಿಂದೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಈ ವಾರೆಂಟ್ ರದ್ದುಗೊಳಿಸುವಂತೆ ಕೋರಿ ಧನ್ವೀರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಧನ್ವೀರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರ ಏಕಸದಸ್ಯ ಪೀಠದ ಮುಂದೆ ನಡೆಯಿತು. ಈ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಅನೂಪ್ ಕುಮಾರ್, ವಾರೆಂಟ್‌ಗೆ ನ್ಯಾಯಾಲಯ ತಡೆ ನೀಡಿದ್ದರೂ ನಟ ಧನ್ವೀರ್ ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ ಎಂದು ತಿಳಿಸಿದರು.
ಅಲ್ಲದೇ, ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಸರ್ಕಾರಿ ವಕೀಲರ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್, ನವೆಂಬರ್ 30ರಂದು ಸಿಸಿಬಿ ಪೊಲೀಸರ ಮುಂದೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ಧನ್ವೀರ್‌ಗೆ ಸೂಚಿಸಿದೆ.
ಅಷ್ಟಕ್ಕೂ ಜೈಲಿನ ವಿಡಿಯೋ ಸೋರಿಕೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಧನ್ವೀರ್ ಬಳಿ ಯಾವ ಮಾಹಿತಿ ಪಡೆಯಲು ಮುಂದಾಗಿದ್ದಾರೆ? ವಿಚಾರಣೆ ವೇಳೆ ಯಾವೆಲ್ಲ ಪ್ರಶ್ನೆಗಳು ಎದುರಾಗಲಿವೆ? ಇದೀಗ ಎಲ್ಲರ ಗಮನ ನವೆಂಬರ್ 30ರ ವಿಚಾರಣೆಯತ್ತ ನೆಟ್ಟಿದೆ.