ಬೆಂಗಳೂರಲ್ಲಿ ₹11 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ! ದೆಹಲಿಯಿಂದ ನಡೆಯುತ್ತಿತ್ತು ಮಾದಕ ದಂಧೆ,ಪೊಲೀಸರ ಬಲೆಗೆ ಇಬ್ಬರು!

ಬೆಂಗಳೂರಲ್ಲಿ ₹11 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ! ದೆಹಲಿಯಿಂದ ನಡೆಯುತ್ತಿತ್ತು ಮಾದಕ ದಂಧೆ,ಪೊಲೀಸರ ಬಲೆಗೆ ಇಬ್ಬರು!

ಬೆಂಗಳೂರಿನಲ್ಲಿ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕಲು ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಬೆನ್ನಲ್ಲೇ ಭಾರೀ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ. ಯಲಹಂಕ ಓಲ್ಡ್ ಟೌನ್ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 11 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಇಮ್ರಾನ್ ಸಿದ್ದಿಕ್ ಮತ್ತು ಆಯಿಷಾ ಬಂಧಿತ ಆರೋಪಿಗಳು. ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಂದು ಯಲಹಂಕ ಉಪನಗರದ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದರು ಎಂಬ ಆರೋಪ ಇವರ ಮೇಲಿದೆ.

ಕಾರ್ಯಾಚರಣೆ ವೇಳೆ ಬಂಧಿತರಿಂದ 5 ಕೆಜಿಗೂ ಅಧಿಕ ತೂಕದ ಎಂಡಿಎಂಎ (MDMA) ಸೇರಿದಂತೆ ಮಾದಕ ವಸ್ತುಗಳು ಹಾಗೂ ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಷ್ಟಕ್ಕೂ ಈ ಡ್ರಗ್ಸ್ ದಂಧೆಯ ಹಿಂದೆ ದೊಡ್ಡ ಜಾಲವೇ ಇದೆಯಾ? ದೆಹಲಿಯಲ್ಲಿ ಆರೋಪಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದವರು ಯಾರು? ಬೆಂಗಳೂರಿನಲ್ಲಿ ಇವರೊಂದಿಗೆ ಇನ್ನೂ ಯಾರಾದರೂ ಸಂಪರ್ಕ ಹೊಂದಿದ್ದಾರಾ? ಎಂಬ ಪ್ರಶ್ನೆಗಳು ಇದೀಗ ಮೂಡಿವೆ.

ಈ ಸಂಬಂಧ ಯಲಹಂಕ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *