ಮೈತ್ರಿ ಧರ್ಮ ಪಾಲಿಸಿ ಹಿರಿಯೂರು ಉಪಚುನಾವಣೆ ಎದುರಿಸೋಣ ಕುಮಾರಸ್ವಾಮಿ ಬಳಿ ಅಮಿತ್ ಶಾ ಚರ್ಚೆ!!
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಹಿರಿಯೂರು ಉಪಚುನಾವಣೆ ಸೇರಿದಂತೆ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಅವಕಾಶ ನೀಡುವಂತೆ ಕುಮಾರಸ್ವಾಮಿ ಅವರು ಅಮಿತ್ ಶಾ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಹಿರಿಯೂರಿನಲ್ಲಿ ಜೆಡಿಎಸ್ ಉತ್ತಮ ಅವಕಾಶ ಹೊಂದಿದೆ ಎಂಬುದನ್ನು ಅವರು ವಿವರಿಸಿದ್ದಾರೆ ಎಂಬದು ತಿಳಿದುಬಂದಿದೆ. ಶೀಘ್ರದಲ್ಲೇ ಅಭ್ಯರ್ಥಿ ಆಯ್ಕೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಕುಮಾರಸ್ವಾಮಿಗೆ ಅಮಿತ್ ಶಾ ಭರವಸೆ ನೀಡಿದ್ದಾರೆ. ಈ ಸಂಬಂಧ ಅಭ್ಯರ್ಥಿ ಅಂತಿಮಗೊಳಿಸುವ ಮೊದಲು ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರೊಂದಿಗೆ ಚರ್ಚಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
ಮುಂಬರುವ ಚುನಾವಣೆಗಳಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎಂಪಿ ಮತ್ತು ಎಂಎಲ್ಸಿ ಚುನಾವಣೆಗಳಂತೆ ಮೈತ್ರಿ ಧರ್ಮವನ್ನು ಪಾಲಿಸಿ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಅಮಿತ್ ಶಾ ಹೇಳಿರುವುದು ಗೊತ್ತಾಗಿದೆ. ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಕಾರ್ಯತಂತ್ರ ರೂಪಿಸುವ ಕುರಿತು ಇಬ್ಬರೂ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.
ನವದೆಹಲಿ, ನವೆಂಬರ್ 20: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಅವಕಾಶ ನೀಡುವಂತೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಸ್ಥಳೀಯ ರಾಜಕೀಯ ಪರಿಸ್ಥಿತಿ ಹಾಗೂ ಚುನಾವಣೆಯಲ್ಲಿ ಜೆಡಿಎಸ್ಗೆ ಇರುವ ಅವಕಾಶಗಳ ಕುರಿತು ಅಮಿತ್ ಶಾ ಅವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ
ಮೈತ್ರಿ ಧರ್ಮ ಪಾಲಿಸಲು ಅಮಿತ್ ಶಾ ಸಲಹೆ
ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ಹಿಂದಿನ ಲೋಕಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಮಾದರಿಯಲ್ಲೇ ಹಿರಿಯೂರು ಉಪಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂಬ ಅಭಿಪ್ರಾಯವನ್ನು ಅಮಿತ್ ಶಾ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಹಿಂದಿನ ಚುನಾವಣೆಗಳ ಫಲಿತಾಂಶ, ಸ್ಥಳೀಯ ಮತದಾರರ ಒಲವು ಹಾಗೂ ಅಭ್ಯರ್ಥಿಗಳ ಗೆಲುವಿನ ಸಾಧ್ಯತೆಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲು ವರಿಷ್ಠರು ಮುಂದಾಗಿದ್ದಾರೆ.
ದೇವೇಗೌಡರ ಜೊತೆಗೂ ಚರ್ಚೆ?
ಹಿರಿಯೂರು ಉಪಚುನಾವಣೆಯ ಅಭ್ಯರ್ಥಿ ಆಯ್ಕೆಗೂ ಮುನ್ನ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರೊಂದಿಗೆ ಚರ್ಚಿಸುವ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ತಿಳಿದುಬಂದಿದೆ. ಶೀಘ್ರದಲ್ಲೇ ಅಭ್ಯರ್ಥಿ ಆಯ್ಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ಅಮಿತ್ ಶಾ ನೀಡಿದ್ದಾರೆ ಎನ್ನಲಾಗಿದೆ
ಜೆಡಿಎಸ್ಗೆ ಟಿಕೆಟ್ ನೀಡುವಂತೆ ಒತ್ತಡ
ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ಗೆ ತನ್ನದೇ ಆದ ಮತಬ್ಯಾಂಕ್ ಇದ್ದು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಈ ಬಾರಿ ಪಕ್ಷದ ಅಭ್ಯರ್ಥಿಯೇ ಸ್ಪರ್ಧಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.
2013ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸುಮಾರು 1,200 ಮತಗಳ ಅಂತರದಿಂದ ಸೋಲು ಕಂಡಿದ್ದರು ಎಂದು ಕುಮಾರಸ್ವಾಮಿ ನೆನಪಿಸಿದ್ದಾರೆ. ಕ್ಷೇತ್ರದಲ್ಲಿನ ಪಕ್ಷದ ಹಿಂದಿನ ಸಾಧನೆಯನ್ನೂ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಪರಿಗಣಿಸಬೇಕು ಎಂಬುದು ಜೆಡಿಎಸ್ನ ನಿಲುವಾಗಿದೆ
ಅಮಿತ್ ಶಾ ಭೇಟಿಯಾದ ಬಿ.ವೈ. ವಿಜಯೇಂದ್ರ
ಇನ್ನೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ. ಹಿರಿಯೂರು ಉಪಚುನಾವಣೆ, ರಾಜ್ಯದ ರಾಜಕೀಯ ಬೆಳವಣಿಗೆಗಳು, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯ ಸಿದ್ಧತೆ ಮತ್ತು ಪಕ್ಷದ ಸಂಘಟನೆ ಕುರಿತು ಚರ್ಚೆ ನಡೆಸಿದ್ದಾರೆ.
ಹಿರಿಯೂರು ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳಬೇಕು ಎಂಬ ಒಲವು ಪಕ್ಷದ ಕೆಲವು ಮುಖಂಡರಲ್ಲಿದೆ. ಆದರೆ ಅಂತಿಮವಾಗಿ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಬಿಜೆಪಿ ನಾಯಕರು ತಿಳಿಸಿದ್ದಾರೆ.
ಕಾಂಗ್ರೆಸ್ನಲ್ಲೂ ಟಿಕೆಟ್ಗಾಗಿ ಪೈಪೋಟಿ
ಮಾಜಿ ಸಚಿವ ಡಿ. ಸುಧಾಕರ್ ಅವರ ನಿಧನದಿಂದ ಹಿರಿಯೂರು ವಿಧಾನಸಭಾ ಕ್ಷೇತ್ರ ತೆರವಾಗಿದೆ. ಇದೀಗ ಅವರ ಪುತ್ರ ಸುಹಾಸ್ ಸುಧಾಕರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯತೆ ಕುರಿತು ಚರ್ಚೆಗಳು ನಡೆಯುತ್ತಿವೆ.
ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕೂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ವರದಿಯಾಗಿದೆ. ಕ್ಷೇತ್ರದಲ್ಲಿ ಕಾಡುಗೊಲ್ಲ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ಮತದಾರರು ಅಭ್ಯರ್ಥಿ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ.