2027ರ ವಿಶ್ವಕಪ್ನಲ್ಲಿ ರೋಹಿತ್-ಕೊಹ್ಲಿ ಆಟ ಫಿಕ್ಸ್? ಟೀಂ ಇಂಡಿಯಾ ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್!
ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ವಿಶ್ವಕಪ್ಗೆ ಭಾರತದ ಇಬ್ಬರು ದಿಗ್ಗಜರು ಎಂಟ್ರಿ? ರೋಹಿತ್-ಕೊಹ್ಲಿ ಭವಿಷ್ಯದ ಬಗ್ಗೆ ಮಹತ್ವದ ಸುಳಿವು!
ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಸುದ್ದಿಯೊಂದು ಹೊರಬಿದ್ದಿದೆ. 2027ರ ಏಕದಿನ ವಿಶ್ವಕಪ್ನಲ್ಲಿ ಟೀಂ ಇಂಡಿಯಾದ ಇಬ್ಬರು ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ. ಈ ವರದಿ ಕ್ರಿಕೆಟ್ ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ದೈನಿಕ್ ಜಾಗರಣ್ ವರದಿಯ ಪ್ರಕಾರ, ಮಾಜಿ ನಾಯಕರುಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಸಾಧ್ಯತೆಯಿದೆ. ಆದರೆ ಇದಕ್ಕೆ ಇಬ್ಬರು ಆಟಗಾರರ ಫಿಟ್ನೆಸ್ ಮತ್ತು ಅವರ ಆಟ ಮುಂದುವರಿಸುವ ನಿರ್ಧಾರವೂ ಪ್ರಮುಖವಾಗಿರಲಿದೆ.
2027ರ ಅಕ್ಟೋಬರ್ 2ರಿಂದ ನವೆಂಬರ್ 21ರವರೆಗೆ ದಕ್ಷಿಣ ಆಫ್ರಿಕಾದಲ್ಲಿ 50 ಓವರ್ಗಳ ವಿಶ್ವಕಪ್ ನಡೆಯಲಿದೆ. ಈ ಟೂರ್ನಿಯಲ್ಲಿ ರೋಹಿತ್ ಮತ್ತು ಕೊಹ್ಲಿ ಆಡಿದರೆ, ಮತ್ತೊಮ್ಮೆ ವಿಶ್ವ ವೇದಿಕೆಯಲ್ಲಿ ಈ ಇಬ್ಬರು ದಿಗ್ಗಜರ ಆಟವನ್ನು ಕಣ್ತುಂಬಿಕೊಳ್ಳುವ ಅವಕಾಶ ಅಭಿಮಾನಿಗಳಿಗೆ ಸಿಗಲಿದೆ.
ಈಗಾಗಲೇ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಹಲವು ದಾಖಲೆಗಳನ್ನು ಬರೆದಿರುವ ಈ ಜೋಡಿ, ಮತ್ತೊಂದು ವಿಶ್ವಕಪ್ನಲ್ಲಿ ಭಾರತದ ಗೆಲುವಿಗೆ ಕೊಡುಗೆ ನೀಡುತ್ತಾರಾ ಎಂಬ ಕುತೂಹಲ ಹೆಚ್ಚಾಗಿದೆ. ಆದರೆ 2027ರ ವಿಶ್ವಕಪ್ವರೆಗೂ ಇಬ್ಬರೂ ತಮ್ಮ ಫಿಟ್ನೆಸ್ ಕಾಪಾಡಿಕೊಂಡು ಕ್ರಿಕೆಟ್ ಮುಂದುವರಿಸುತ್ತಾರಾ ಎಂಬುದೇ ಸದ್ಯದ ದೊಡ್ಡ ಪ್ರಶ್ನೆ.