ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಿಗ್ ಶಾಕ್! ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ, ಏನಿದು ಪ್ರಕರಣ?
ಪ್ರಚೋದನಕಾರಿ ಭಾಷಣ ಹಿನ್ನೆಲೆ ಮಾಜಿ ಸಂಸದರ ವಿರುದ್ಧ ದೂರು ದಾಖಲಾಗಿತ್ತು.
ಪ್ರತಾಪ್ ಸಿಂಹಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಮಾಜಿ ಬಿಜೆಪಿ ಸಂಸದರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. 2024ರ ಸೆಪ್ಟೆಂಬರ್ನಲ್ಲಿ ಶಹಾಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಲು ಕೋರ್ಟ್ ಹಸಿರು ನಿಶಾನೆ ತೋರಿದೆ. ಜೊತೆಗೆ ಕಾರ್ಯಕ್ರಮ ಆಯೋಜಿಸಿದ್ದ ಮೂವರ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿ ಬಿಗ್ ರಿಲೀಫ್ ನೀಡಿದೆ.
ಘಟನೆಯ ಹಿನ್ನೆಲೆ ಏನು?
ಸೆಪ್ಟೆಂಬರ್ 21, 2024ರಂದು ಗಣೇಶ ಮೂರ್ತಿ ವಿಸರ್ಜನೆಯ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ಪ್ರತಾಪ್ ಸಿಂಹ ಮುಖ್ಯ ಅತಿಥಿಯಾಗಿದ್ದರು. ಆಯೋಜಕರು ಕಾರ್ಯಕ್ರಮಕ್ಕೆ ಪೂರ್ವಾನುಮತಿ ಪಡೆದಿದ್ದರು. ಈ ವೇಳೆ ಸಿಂಹ ನೀಡಿದ ಭಾಷಣದ ವಿರುದ್ಧ ಸೆಪ್ಟೆಂಬರ್ 23ರಂದು ದೂರು ದಾಖಲಾಗಿದ್ದು, ಶಹಾಪುರ ಪೊಲೀಸರು BNS ಸೆಕ್ಷನ್ 192 (ಗಲಭೆಗೆ ಪ್ರಚೋದನೆ) ಮತ್ತು ಸೆಕ್ಷನ್ 299 ಅಡಿಯಲ್ಲಿ FIR ದಾಖಲಿಸಿದ್ದರು.
ಪ್ರತಾಪ್ ಸಿಂಹ ಅಂದು ಹೇಳಿದ್ದೇನು?
ದೂರಿನಲ್ಲಿ ಉಲ್ಲೇಖಿಸಲಾದ ಪ್ರಕಾರ, ಹಿಂದೂ ಧಾರ್ಮಿಕ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆಯುವುದನ್ನು ಪ್ರಶ್ನಿಸಿ, ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂಗಳು ಕಲ್ಲು ತೂರಿದ ನಿದರ್ಶನ ತೋರಿಸುವಂತೆ ಸವಾಲು ಹಾಕಿದ್ದರು. ದೇಶದಲ್ಲಿ ಶೇ. 80ರಷ್ಟು ಹಿಂದೂಗಳಿದ್ದು, ಅವರೂ ಕಲ್ಲು ಎತ್ತಿಕೊಂಡರೆ ಏನಾಗಬಹುದು ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದರು. ಪ್ರಚೋದನಕಾರಿ ಭಾಷಣ ಹಿನ್ನೆಲೆ ಮಾಜಿ ಸಂಸದರ ವಿರುದ್ಧ ದೂರು ದಾಖಲಾಗಿತ್ತು.
ಇನ್ನು, ಈ ಪ್ರಕರಣದ ವಿಚಾರಣೆಯನ್ನು ನಡೆಸಿರುವ ಹೈಕೋರ್ಟ್, ಭಾಷಣದ ವಿಷಯಗಳು ಮತ್ತು ದೂರಿನ ಆಧಾರದ ಮೇಲೆ ಪ್ರತಾಪ್ ಸಿಂಹ ವಿರುದ್ಧ ತನಿಖೆ ನಡೆಸುವ ಅಗತ್ಯವಿದೆ. ಗಲಭೆ ಉಂಟುಮಾಡುವ ಉದ್ದೇಶ ಅವರಿಗೆ ಇತ್ತೇ ಎಂಬುದನ್ನು ತನಿಖೆಯಲ್ಲಿ ಪರಿಶೀಲಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಭಾಷಣದ ಬಳಿಕ ಯಾವುದೇ ಗಲಭೆ ನಡೆದಿಲ್ಲವಾದ್ದರಿಂದ ಈ ಸೆಕ್ಷನ್ನ ಮೊದಲ ಭಾಗ ಅನ್ವಯಿಸುವುದಿಲ್ಲ. ಆದರೆ, ಗಲಭೆ ನಡೆಯದಿದ್ದರೂ ದುರುದ್ದೇಶದಿಂದ ಪ್ರಚೋದನೆ ನೀಡಿದ ಆರೋಪದಡಿ ಎರಡನೇ ಭಾಗ ಅನ್ವಯಿಸಬಹುದೇ ಎಂಬುದನ್ನು ತನಿಖೆ ಮೂಲಕ ನಿರ್ಧರಿಸಿ ವರದಿ ಸಲ್ಲಿಸಬೇಕು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಇನ್ನು, ಪ್ರತಾಪ್ ಸಿಂಹ ಅವರಿಗೆ ಪ್ರಚೋದನಕಾರಿ ಹೇಳಿಕೆ ನೀಡುವಂತೆ ಆಯೋಜಕರು ಪ್ರೇರೇಪಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲದ ಕಾರಣ, ಮೂವರು ಆಯೋಜಕರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲಾಗಿದೆ.
ಅಷ್ಟಕ್ಕೂ ಪ್ರತಾಪ್ ಸಿಂಹ ವಿರುದ್ಧ ದಾಖಲಾಗಿದ್ದ ಪ್ರಕರಣವೇನು?
2024ರ ಸೆಪ್ಟೆಂಬರ್ 21ರಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಅಂಗವಾಗಿ ಸಾರ್ವಜನಿಕ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪ್ರತಾಪ್ ಸಿಂಹ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರತಾಪ್ ಸಿಂಹ ಅವರು ಹಿಂದೂ ಧಾರ್ಮಿಕ ಮೆರವಣಿಗೆಗಳ ಮೇಲೆ ನಡೆಯುವ ಕಲ್ಲು ತೂರಾಟದ ಕುರಿತು ಪ್ರಶ್ನಿಸಿದ್ದರು.
ದೇಶದಲ್ಲಿ ಶೇಕಡಾ 80ರಷ್ಟು ಹಿಂದೂಗಳಿದ್ದಾರೆ. ಹಿಂದೂಗಳೂ ಕಲ್ಲುಗಳನ್ನು ಕೈಗೆತ್ತಿಕೊಂಡರೆ ಪರಿಸ್ಥಿತಿ ಏನಾಗಬಹುದು ಎಂಬ ಅರ್ಥದಲ್ಲಿ ಅವರು ಹೇಳಿಕೆ ನೀಡಿದ್ದರು. ಅಲ್ಲದೆ ಪೆಟ್ರೋಲ್ ಬಾಂಬ್ಗಳ ಬಗ್ಗೆಯೂ ಮಾತನಾಡಿದ್ದರು ಎನ್ನಲಾಗಿದೆ.
ಈ ಹೇಳಿಕೆಗಳು ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತಿವೆ ಹಾಗೂ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಸಾಧ್ಯತೆಯಿದೆ ಎಂದು ಆರೋಪಿಸಿ ಶಹಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
2024ರ ಸೆಪ್ಟೆಂಬರ್ 23ರಂದು ಪ್ರತಾಪ್ ಸಿಂಹ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
ಯಾವ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು?
ಪ್ರತಾಪ್ ಸಿಂಹ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023ರ ಎರಡು ಪ್ರಮುಖ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಸೆಕ್ಷನ್ 192: ಗಲಭೆಗೆ ಕಾರಣವಾಗುವ ಉದ್ದೇಶದಿಂದ ಪ್ರಚೋದನೆ ನೀಡುವ ಆರೋಪಕ್ಕೆ ಸಂಬಂಧಿಸಿದ ಕಾನೂನು ನಿಯಮ.
ಸೆಕ್ಷನ್ 299: ಉದ್ದೇಶಪೂರ್ವಕ ಹಾಗೂ ದುರುದ್ದೇಶಪೂರಿತ ಕೃತ್ಯಗಳ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಆರೋಪಕ್ಕೆ ಸಂಬಂಧಿಸಿದ ನಿಯಮ.
ಈ ಆರೋಪಗಳಿಗೆ ತಮ್ಮ ಭಾಷಣ ಅನ್ವಯಿಸುವುದಿಲ್ಲ ಎಂದು ಪ್ರತಾಪ್ ಸಿಂಹ ಪರ ವಕೀಲರು ವಾದಿಸಿದ್ದರು. ಅಲ್ಲದೆ ಪ್ರಕರಣ ದಾಖಲಿಸುವ ಸಂದರ್ಭದಲ್ಲಿ ಪೊಲೀಸರು ನಿಗದಿತ ಕಾನೂನು ಪ್ರಕ್ರಿಯೆಯನ್ನು ಪಾಲಿಸಿಲ್ಲ ಎಂಬ ಆಕ್ಷೇಪವನ್ನೂ ವ್ಯಕ್ತಪಡಿಸಿದ್ದರು.