ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ; ಬಿಜೆಪಿಯಿಂದ 25 ದಿನಗಳ ‘ಸೇವಾ ದೂತ’ ಅಭಿಯಾನ! ಡಿಸೆಂಬರ್ನಲ್ಲಿ ಕಮಲ ಪಡೆಯ ಹೊಸ ತಂತ್ರವೇನು?
ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನದ 25 ವರ್ಷಗಳ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ವಿನೂತನ ಅಭಿಯಾನಕ್ಕೆ ಸಜ್ಜಾಗಿದೆ. ಡಿಸೆಂಬರ್ 1ರಿಂದ 25ರವರೆಗೆ ನಡೆಯಲಿರುವ ‘ಸೇವಾ ದೂತ’ ಅಭಿಯಾನದಡಿ ಬಿಜೆಪಿ ನಾಯಕರು ಜನರ ಬಳಿಗೇ ತೆರಳಿ ವಾಸ್ತವ್ಯ ಹೂಡಲಿದ್ದಾರೆ. ವಿಶೇಷವಾಗಿ ಚುನಾವಣೆ ಎದುರಿಸಲಿರುವ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅಷ್ಟಕ್ಕೂ ಈ ಅಭಿಯಾನದ ಹಿಂದಿನ ಉದ್ದೇಶವೇನು?
ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನದ 25 ವರ್ಷಗಳ ಹಿನ್ನೆಲೆಯಲ್ಲಿ ಬಿಜೆಪಿ ಬೃಹತ್ ಜನಸಂಪರ್ಕ ಅಭಿಯಾನಕ್ಕೆ ಮುಂದಾಗಿದೆ. ಡಿಸೆಂಬರ್ 1ರಿಂದ ಆರಂಭವಾಗಲಿರುವ ‘ಸೇವಾ ದೂತ’ ಅಭಿಯಾನ ಡಿಸೆಂಬರ್ 25ರವರೆಗೆ ದೇಶಾದ್ಯಂತ ನಡೆಯಲಿದೆ.
ವಿಧಾನಸಭಾ ಕ್ಷೇತ್ರಗಳಲ್ಲೇ ಬಿಜೆಪಿ ನಾಯಕರ ವಾಸ್ತವ್ಯ!

25 ದಿನಗಳ ಈ ವಿಶೇಷ ಅಭಿಯಾನದಡಿ ಬಿಜೆಪಿಯ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ದೇಶದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸ್ಥಳೀಯ ಜನರೊಂದಿಗೆ ನೇರ ಸಂಪರ್ಕ ಸಾಧಿಸಿ, ಅವರ ಸಮಸ್ಯೆಗಳು ಹಾಗೂ ನಿರೀಕ್ಷೆಗಳನ್ನು ಆಲಿಸಲಿದ್ದಾರೆ.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಜನರಿಗೆ ತಲುಪುತ್ತಿವೆಯೇ? ಯೋಜನೆಗಳ ಅನುಷ್ಠಾನದಲ್ಲಿ ಏನಾದರೂ ಲೋಪಗಳಿವೆಯೇ? ಎಂಬುದರ ಕುರಿತು ಪರಿಶೀಲನೆ ನಡೆಸಲಿದ್ದಾರೆ.
ಸರ್ಕಾರಿ ಯೋಜನೆಗಳ ಫಲಾನುಭವಿಗಳ ಜೊತೆ ನೇರ ಸಂವಾದ!

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಖುದ್ದಾಗಿ ಭೇಟಿಯಾಗಲಿರುವ ಬಿಜೆಪಿ ನಾಯಕರು, ಯೋಜನೆಗಳ ಕುರಿತು ಅವರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
ಸರ್ಕಾರಿ ಸೌಲಭ್ಯಗಳನ್ನು ಪಡೆಯುವಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸುವುದು ಹಾಗೂ ಪಕ್ಷದ ಜನಸಂಪರ್ಕವನ್ನು ಮತ್ತಷ್ಟು ಬಲಪಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.
ಚುನಾವಣೆ ನಡೆಯಲಿರುವ ರಾಜ್ಯಗಳ ಮೇಲೆ ವಿಶೇಷ ಕಣ್ಣು!

ಈ ಅಭಿಯಾನದಲ್ಲಿ ಉತ್ತರ ಪ್ರದೇಶ ಹಾಗೂ ಪಂಜಾಬ್ ಸೇರಿದಂತೆ ಮುಂಬರುವ ವಿಧಾನಸಭಾ ಚುನಾವಣೆ ಎದುರಿಸಲಿರುವ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲು ಬಿಜೆಪಿ ನಿರ್ಧರಿಸಿದೆ.
ಚುನಾವಣೆಗೂ ಮುನ್ನ ಸ್ಥಳೀಯ ಜನರ ಮನಸ್ಥಿತಿ, ನಿರೀಕ್ಷೆಗಳು ಹಾಗೂ ಸಮಸ್ಯೆಗಳನ್ನು ಅರಿತುಕೊಳ್ಳಲು ಈ ಅಭಿಯಾನ ನೆರವಾಗುವ ನಿರೀಕ್ಷೆಯಿದೆ. ಹೀಗಾಗಿ ಬಿಜೆಪಿಯ ಈ ಜನಸಂಪರ್ಕ ಅಭಿಯಾನ ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ.
ಡಿಸೆಂಬರ್ 25ರಂದು ಅಭಿಯಾನಕ್ಕೆ ತೆರೆ!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹರೀಶ್ ದ್ವಿವೇದಿ ಅವರನ್ನು ‘ಸೇವಾ ದೂತ’ ಅಭಿಯಾನದ ಸಂಚಾಲಕರನ್ನಾಗಿ ನೇಮಿಸಲಾಗಿದೆ. ದೇಶಾದ್ಯಂತ ಅಭಿಯಾನವನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
ಡಿಸೆಂಬರ್ 1ರಂದು ಆರಂಭವಾಗಲಿರುವ ಅಭಿಯಾನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25ರ ಸುಶಾಸನ ದಿನದಂದು ಮುಕ್ತಾಯಗೊಳ್ಳಲಿದೆ.
ಒಂದೆಡೆ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದ ಪರಿಶೀಲನೆ, ಮತ್ತೊಂದೆಡೆ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಜನಸಂಪರ್ಕಕ್ಕೆ ಆದ್ಯತೆ! ಬಿಜೆಪಿಯ ಈ 25 ದಿನಗಳ ಅಭಿಯಾನ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತಾ? ಮುಂಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ರಾಜಕೀಯ ಲಾಭ ತಂದುಕೊಡುತ್ತಾ ಎಂಬ ಕುತೂಹಲ ಮೂಡಿದೆ.