‘ಆಶಾಗಳು ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತೆ!’ 10 ದಿನಗಳ ಪ್ರತಿಭಟನೆಗೆ ಯು.ಟಿ. ಖಾದರ್ ಗರಂ; ₹15 ಸಾವಿರ ಸಂಬಳ ಕೊಡಬೇಕಾ ಎಂದು ಪ್ರಶ್ನೆ!
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಹಗಲು-ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ‘ಆಶಾಗಳ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತದೆ’ ಎಂಬ ಯು.ಟಿ. ಖಾದರ್ ಅವರ ಹೇಳಿಕೆ ಚರ್ಚೆಗೆ ಕಾರಣವಾಗಿದೆ.
ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದಿಂದ ಸೂಕ್ತ ಆದೇಶ ಹೊರಬೀಳುವ ನಿರೀಕ್ಷೆಯಲ್ಲಿರುವ ಆಶಾಗಳ ಹೋರಾಟದ ಕುರಿತು ಯು.ಟಿ. ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಶಾಗಳಿಲ್ಲದೆ ಆರೋಗ್ಯ ಇಲಾಖೆ ಸ್ಥಗಿತವಾಗಿದೆಯಾ?‘10 ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಆರೋಗ್ಯ ಇಲಾಖೆ ಏನಾದರೂ ಸಮಸ್ಯೆಗೆ ಸಿಲುಕಿದೆಯಾ? ಹಳ್ಳಿಗಳಲ್ಲಿ ಏನಾದರೂ ಸಮಸ್ಯೆಯಾಗಿದೆಯಾ? ಹೆರಿಗೆ ಆಗುತ್ತಿದೆ, ಎಲ್ಲವೂ ನಡೆಯುತ್ತಿದೆ’ ಎಂದು ಖಾದರ್ ಪ್ರಶ್ನಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಸ್ವತಃ ಆಶಾಗಳೇ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಆಶಾಗಳು ಇಲ್ಲ ಅಂದ್ರೆ ಡಾಕ್ಟರ್, ನರ್ಸ್ ಇಲ್ವಾ?
ಆಶಾ ಕಾರ್ಯಕರ್ತೆಯರ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಸ್ವತಃ ಆಶಾಗಳೇ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಆಶಾಗಳು ಇಲ್ಲ ಅಂದ್ರೆ ಡಾಕ್ಟರ್, ನರ್ಸ್ ಇಲ್ವಾ?
ಆಶಾಗಳು ಇದ್ದರೂ ಆರೋಗ್ಯ ಇಲಾಖೆ ನಡೆಯುತ್ತೆ, ಇಲ್ಲದಿದ್ದರೂ ನಡೆಯುತ್ತೆ. ಅದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆಶಾಗಳು ಇಲ್ಲ ಅಂದರೆ ಡಾಕ್ಟರ್ ಇಲ್ವಾ? ನರ್ಸ್ ಇಲ್ವಾ?’ ಎಂದು ಖಾದರ್ ಪ್ರಶ್ನಿಸಿದ್ದಾರೆ.
ತಮಿಳುನಾಡಿನ ಉದಾಹರಣೆ ಕೊಟ್ಟ ಖಾದರ್!
ತಮಿಳುನಾಡಿನ ಉದಾಹರಣೆ ಕೊಟ್ಟ ಖಾದರ್!
ತಮಿಳುನಾಡಿನಲ್ಲಿ ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೂ ತಾಯಿ ಮರಣ ಪ್ರಮಾಣ ಹಾಗೂ ಶಿಶು ಮರಣ ಪ್ರಮಾಣ ಕಡಿಮೆ ಇದೆ ಎಂದು ಖಾದರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಆಶಾ ಕಾರ್ಯಕರ್ತೆಯರಿದ್ದರೂ, ತಮಿಳುನಾಡಿನ ಆರೋಗ್ಯ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆಶಾಗಳಿಗೆ ₹15 ಸಾವಿರ ಸಂಬಳ ಕೊಡಬೇಕಾ?‘ನರ್ಸ್ಗಳಿಗೆ 10 ಸಾವಿರ ರೂಪಾಯಿ ಸಂಬಳ, ಶಿಕ್ಷಕರಿಗೆ 12 ಸಾವಿರ ರೂಪಾಯಿ ಸಂಬಳ, ಆರೋಗ್ಯ ಸಹಾಯಕರಿಗೆ 4,500 ರೂಪಾಯಿ ಸಂಬಳ ನೀಡಲಾಗುತ್ತಿದೆ. ಇವರಿಗೆ 15 ಸಾವಿರ ರೂಪಾಯಿ ಕೊಡಬೇಕಾ?’ ಎಂದು ಖಾದರ್ ಪ್ರಶ್ನಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಗರ್ಭಿಣಿಯರ ಆರೈಕೆ, ತಾಯಿ-ಮಗುವಿನ ಆರೋಗ್ಯ, ಲಸಿಕೆ ಅಭಿಯಾನ ಸೇರಿದಂತೆ ಹಲವು ಆರೋಗ್ಯ ಸೇವೆಗಳಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಒಂದೆಡೆ ತಮ್ಮ ದುಡಿಮೆಗೆ ತಕ್ಕ ಗೌರವಧನ ನೀಡುವಂತೆ ಆಶಾಗಳು ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಅವರ ಸೇವೆಯ ಅಗತ್ಯತೆಯನ್ನೇ ಪ್ರಶ್ನಿಸುವಂತಹ ಹೇಳಿಕೆ ಹೊರಬಿದ್ದಿದೆ. ಇದೀಗ ಖಾದರ್ ಹೇಳಿಕೆಗೆ ಆಶಾ ಕಾರ್ಯಕರ್ತೆಯರು ಹೇಗೆ ಪ್ರತಿಕ್ರಿಯಿಸುತ್ತಾರೆ? ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುತ್ತಾ ಎಂಬ ಕುತೂಹಲ ಮೂಡಿದೆ.