ಅಕ್ರಮ ಸಂಬಂಧ ಹೊಂದಿದ್ದ ಯುವಕನಿಂದಲೇ ವಿವಾಹಿತೆಯ ಕೊ*ಲೆ ಕಾರಣ ವಿಚಿತ್ರ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚನ್ಯಾನದಡ್ಡಿ ಗ್ರಾಮದ ಹೊರವಲಯದಲ್ಲಿ ವಿವಾಹಿತ ಮಹಿಳೆಯೊಬ್ಬರು ಕೊಲೆಯಾಗಿದ್ದಾರೆ. ಸುಮಾರು 9 ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಸಂಜಯ್ ಚವ್ಹಾಣ, ಮದುವೆ ವಿಚಾರವಾಗಿ ಉಂಟಾದ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಆರೋಪದ ಮೇಲೆ ಬಂಧಿತನಾಗಿದ್ದಾನೆ. ನಾಪತ್ತೆ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಆಘಾತಕಾರಿ ಮಾಹಿತಿ ತಿಳಿದುಬಂದ ಬೆನ್ನಲ್ಲೇ ಯುವಕನ ಬಂಧನವಾಗಿದೆ.
ವಿವಾಹವಾಗುವುದಕ್ಕೆ ಅಡ್ಡಿಪಡಿಸುತ್ತಿದ್ದಳು ಎಂಬ ಕಾರಣಕ್ಕೆ ವಿವಾಹಿತ ಮಹಿಳೆಯನ್ನು ಕೊಲೆ ಮಾಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚನ್ಯಾನದಡ್ಡಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ನನದಿ ಗ್ರಾಮದ ಐರಾವತಿ ಖೋತ (38) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ನರೇನೂರು ಗ್ರಾಮದ ಸಂಜಯ ಚವ್ಹಾಣ (28) ಎಂದು ತಿಳಿದುಬಂದಿದೆ.
9 ವರ್ಷಗಳ ಅಕ್ರಮ ಸಂಬಂಧ, ಮದುವೆ ವಿಚಾರವಾಗಿ ಕಲಹಆರೋಪಿ ಸಂಜಯ್ ಹುಕ್ಕೇರಿ ತಾಲೂಕಿನ ಯಾದಗೂಡು ಗ್ರಾಮದ ಡಾಬಾದಲ್ಲಿ ಕೆಲಸ ಮಾಡುತ್ತಿದ್ದಾಗ ಐರಾವತಿ ಪರಿಚಯವಾಗಿದ್ದರು. ಬಳಿಕ ಇಬ್ಬರೂ ಸುಮಾರು 9 ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಸಂಜಯ್ ಬೇರೊಬ್ಬ ಯುವತಿಯನ್ನು

ಮದುವೆಯಾಗಲು ಮುಂದಾಗಿದ್ದ. ಈ ವೇಳೆ ಐರಾವತಿ ಮದುವೆಗೆ ಅಡ್ಡಿಪಡಿಸಿದ್ದರು ಎಂದು ಆರೋಪಿಸಲಾಗಿದೆ. ಈ ಹಿಂದೆ ಎರಡು ಬಾರಿ ಮದುವೆಗೆ ಹೆಣ್ಣು ನಿಶ್ಚಯವಾಗಿದ್ದಾಗಲೂ ಐರಾವತಿ ಅದನ್ನು ತಪ್ಪಿಸಿದ್ದರು ಎಂಬ ಆರೋಪವಿದೆ. ಮೂರನೇ ಬಾರಿಗೆ ಮದುವೆಗೆ ಹೆಣ್ಣು ನಿಶ್ಚಯವಾದಾಗಲೂ ತಮ್ಮನ್ನು ಬಿಟ್ಟು ಮದುವೆಯಾಗಬಾರದು ಎಂದು ಐರಾವತಿ ಪಟ್ಟು ಹಿಡಿದಿದ್ದರು. ಇದೇ ವಿಚಾರವಾಗಿ ಸಂಜಯ್ ಕೊಲೆಗೆ ಯೋಜನೆ ರೂಪಿಸಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದೇವಸ್ಥಾನಕ್ಕೆ ತೆರಳಿದ್ದ ಮಹಿಳೆ ನಾಪತ್ತೆನವೆಂಬರ್ 14ರಂದು ಐರಾವತಿ ತೋರಣಹಳ್ಳಿಯ ದೇವಸ್ಥಾನಕ್ಕೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದರು. ಈ ಸಂಬಂಧ ಕುಟುಂಬಸ್ಥರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕರೆ ವಿವರಗಳ ದಾಖಲೆ (CDR) ಆಧರಿಸಿ ಪರಿಶೀಲನೆ ನಡೆಸಿ ಸಂಜಯ್ನನ್ನು ಪತ್ತೆಹಚ್ಚಿದ್ದಾರೆ. ವಿಚಾರಣೆ ವೇಳೆ ಮಹಿಳೆಯನ್ನು ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲ್ಲು, ಬಿಯರ್ ಬಾಟಲಿಯಿಂದ ಹಲ್ಲೆ ಆರೋಪಆರೋಪಿ ಸಂಜಯ್ ಕಲ್ಲು ಹಾಗೂ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಐರಾವತಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಚನ್ಯಾನದಡ್ಡಿ ಗ್ರಾಮದ ಹೊರವಲಯದ ಕಾಡಿನಲ್ಲಿ ಶವವನ್ನು ಎಸೆದು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.