ಕಾಫಿನಾಡಲ್ಲಿ ಎಸ್ಟೇಟ್ ಮಾಲೀಕನ ದರ್ಪ? ಬಂದೂಕು ತೋರಿಸಿ ಕಾರ್ಮಿಕರಿಗೆ ಜೀವ ಬೆದರಿಕೆ!!
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾರ್ಮಿಕರ ಮೇಲೆ ಎಸ್ಟೇಟ್ ಮಾಲೀಕನ ದೌರ್ಜನ್ಯದ ಗಂಭೀರ ಆರೋಪ ಕೇಳಿಬಂದಿದೆ. ಕಾಫಿ ತೋಟದಲ್ಲಿ ಬೆವರು ಸುರಿಸಿ ದುಡಿಯುವ ಕಾರ್ಮಿಕರಿಗೆ ರಕ್ಷಣೆ ನೀಡಬೇಕಾದ ಮಾಲೀಕನೇ ಬಂದೂಕು ಹಿಡಿದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಅಷ್ಟಕ್ಕೂ ಕಾಫಿ ಎಸ್ಟೇಟ್ನಲ್ಲಿ ನಡೆಯುತ್ತಿರುವುದೇನು? ಕಾರ್ಮಿಕರ ಮೇಲಿನ ದೌರ್ಜನ್ಯದ ಆರೋಪದ ಹಿಂದಿನ ಕಥೆ ಏನು?
ಬಂದೂಕು ಹಿಡಿದು ಎಸ್ಟೇಟ್ ಮಾಲೀಕನ ದರ್ಪ!
ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭರತ್ ಎಂಬ ಕಾಫಿ ಎಸ್ಟೇಟ್ ಮಾಲೀಕನ ವಿರುದ್ಧ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರಿಗೆ ಬೆದರಿಕೆ ಹಾಕಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಬಂದೂಕು ತೋರಿಸಿ ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಾರ್ಮಿಕರನ್ನು ಜೀತದಾಳುಗಳಂತೆ ನಡೆಸಿಕೊಂಡ ಆರೋಪ!
ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಜೀತದಾಳುಗಳಂತೆ ನಡೆಸಿಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಕಾರ್ಮಿಕರಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ ಎನ್ನಲಾಗಿದೆ. ಮಹಿಳೆಯೊಬ್ಬರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿರುವ ಆರೋಪವೂ ಎಸ್ಟೇಟ್ ಮಾಲೀಕನ ವಿರುದ್ಧ ಕೇಳಿಬಂದಿದೆ.
ಪೊಲೀಸ್, ಕಾರ್ಮಿಕ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ!
ಕಾರ್ಮಿಕರ ರಕ್ಷಣೆಗೆ ಜಿಲ್ಲಾಡಳಿತ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪೊಲೀಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ. ಕಾರ್ಮಿಕರ ಸುರಕ್ಷತೆಯನ್ನು ಖಚಿತಪಡಿಸುವಂತೆ ಒತ್ತಾಯಿಸಿದ್ದಾರೆ.
ಎಸ್ಟೇಟ್ ಮಾಲೀಕನ ವಿರುದ್ಧ ಕ್ರಮ ಯಾವಾಗ?
ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎಸ್ಟೇಟ್ ಮಾಲೀಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಅಷ್ಟಕ್ಕೂ ಕಾಫಿ ತೋಟದ ಕಾರ್ಮಿಕರ ಪರಿಸ್ಥಿತಿ ಹೇಗಿದೆ? ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ನಿಗಾ ವಹಿಸಿದ್ದಾರಾ? ವೈರಲ್ ವಿಡಿಯೋ ಬೆನ್ನಲ್ಲೇ ಜಿಲ್ಲಾಡಳಿತ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.