ಪೋಷಕರಿಗೆ ಕರೆ ಮಾಡಲಿಲ್ಲವೆಂದು ದಂಪತಿಯನ್ನು ಡ್ರಗ್ಸ್ ಕೇಸ್‌ನಲ್ಲಿ ಸಿಲುಕಿಸಲು ಸಂಚು!

ಪೋಷಕರಿಗೆ ಕರೆ ಮಾಡಲಿಲ್ಲವೆಂದು ದಂಪತಿಯನ್ನು ಡ್ರಗ್ಸ್ ಕೇಸ್‌ನಲ್ಲಿ ಸಿಲುಕಿಸಲು ಸಂಚು!

“ಬ್ಯಾಗ್‌ನಲ್ಲಿ ಗಾಂಜಾ ಇಟ್ಟುಬಿಡಿ” – ಪೊಲೀಸರೇ ಹೀಗೆ ಹೇಳಿದ್ರಾ? ವೈರಲ್ ಆಯ್ತು ಶಾಕಿಂಗ್ CCTV ದೃಶ್ಯ!

ಮಧ್ಯಪ್ರದೇಶದಲ್ಲಿ ಕಾನೂನು ಕಾಪಾಡಬೇಕಾದ ಪೊಲೀಸರೇ ಕಾನೂನು ಉಲ್ಲಂಘಿಸಲು ಮುಂದಾದ್ರಾ? ಯುವಕನೊಬ್ಬನ ಬ್ಯಾಗ್‌ನಲ್ಲಿ ಗಾಂಜಾ ಇಟ್ಟು ಆತನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೂಚನೆ ನೀಡಿರುವ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿವೆ.

ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯ ಹೋಟೆಲ್‌ವೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹೋಟೆಲ್‌ನಲ್ಲಿದ್ದ ಜೋಡಿಯೊಂದು ತಮ್ಮ ಪೋಷಕರಿಗೆ ಕರೆ ಮಾಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (Additional SP) ಸಹೋದ್ಯೋಗಿಗಳಿಗೆ ಯುವಕನ ಬ್ಯಾಗ್‌ನಲ್ಲಿ ಗಾಂಜಾ ಇಡುವಂತೆ ಸೂಚನೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳಲ್ಲಿ, ಯುವಕನನ್ನು ಮಾದಕವಸ್ತು ಪ್ರಕರಣದಲ್ಲಿ ಸಿಲುಕಿಸುವ ಕುರಿತು ಅಧಿಕಾರಿ ಮಾತನಾಡಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ.

ಕಾನೂನು ಪಾಲನೆ ಮಾಡಬೇಕಾದವರೇ ಅಮಾಯಕರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಮುಂದಾದರೆ ನ್ಯಾಯ ಸಿಗುವುದಾದರೂ ಹೇಗೆ? ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.

Leave a Reply

Your email address will not be published. Required fields are marked *