ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಂಗಳೂರಿನ ಚರ್ಚ್ ಪಾದ್ರಿ ಮತ್ತೆ ಅರೆಸ್ಟ್!!

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಂಗಳೂರಿನ ಚರ್ಚ್ ಪಾದ್ರಿ ಮತ್ತೆ ಅರೆಸ್ಟ್!!

ಮಂಗಳೂರಿನ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಅವರನ್ನು ಎರಡನೇ ಬಾರಿಗೆ ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪೆರ್ಮನ್ನೂರಿನ ಸೇಂಟ್ ಸೆಬಾಸ್ಟಿಯನ್ ಚರ್ಚ್‌ನಲ್ಲಿ 13 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗೆ ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಮತ್ತೊಮ್ಮೆ ಬಂಧಿಸಿದ್ದಾರೆ. ಈಗಾಗಲೇ ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪಾದ್ರಿ, ಇದೀಗ ಎರಡನೇ ಬಾರಿ ಮತ್ತೆ ಜೈಲು ಸೇರಿದ್ದಾರೆ. ಡಿಸೆಂಬರ್ 2ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಏನಿದು ಪ್ರಕರಣ?
ಕಳೆದ ಮೇ ತಿಂಗಳಲ್ಲಿ ಮಂಗಳೂರಿನ ಪೆರ್ಮನ್ನೂರು ಗ್ರಾಮದ ಸೇಂಟ್ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಸಿಪ್ರಿಯನ್ ಪಿಂಟೋ ಪಾದ್ರಿಯಾಗಿದ್ದರು. ಈ ಸಂದರ್ಭದಲ್ಲಿ 13 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮೇ 13, 2026ರಂದು ದೂರು ದಾಖಲಾಗಿತ್ತು.

ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಭಾರತೀಯ ನ್ಯಾಯ ಸಂಹಿತೆಯ ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಕಮಿಷನರ್ ಕೇಂದ್ರ ವಿಭಾಗದ ಎಸಿಪಿಗೆ ವಹಿಸಿದ್ದರು. ಇದೀಗ ಇದೇ ಪ್ರಕರಣದಲ್ಲಿ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.

ಈ ಹಿಂದೆಯೂ ಪೋಕ್ಸೋ ಪ್ರಕರಣದಲ್ಲಿ ಬಂಧನ
ಕಳೆದ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ವೆಲೆನ್ಸಿಯಾ ಚರ್ಚ್‌ನಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪಾದ್ರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಇದೀಗ ಮತ್ತೆ ಸಿಪ್ರಿಯನ್ ಪಿಂಟೋ ಬಂಧನವಾಗಿದ್ದು, ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ವಿಚಾರದಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯೂ ಹೋರಾಟ ನಡೆಸುತ್ತಿದೆ.

ಉಳ್ಳಾಲ ಸಮೀಪದ ಪೆರ್ಮನ್ನೂರಿನ ಸೇಂಟ್ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಸಿಪ್ರಿಯನ್ ಪಿಂಟೊ ಪಾದ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

2026ರ ಮೇ 13ರಂದು ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ನವೆಂಬರ್ 8ರಂದು ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75(2) ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರಿನ ವೆಲೆನ್ಸಿಯಾ ಚರ್ಚ್‌ನ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ (65) ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಈ ಹಿಂದೆ ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪಾದ್ರಿ ಇದೀಗ ಎರಡನೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಾರೆ.

ನವೆಂಬರ್ 18ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ಬಂಧನ!
ಎರಡನೇ ಪ್ರಕರಣ ದಾಖಲಾದ ಬಳಿಕವೂ ಪಾದ್ರಿಯ ಬಂಧನ ವಿಳಂಬವಾಗಿತ್ತು. ಹೃದಯ ಸಂಬಂಧಿ ಆರೋಗ್ಯ ಸಮಸ್ಯೆಯಿಂದಾಗಿ ಸಿಪ್ರಿಯನ್ ಪಿಂಟೊ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.

ಬಂಧನ ವಿಳಂಬವಾಗುತ್ತಿರುವುದಕ್ಕೆ ಸಾಮಾಜಿಕ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಕುರಿತು ಆಕ್ರೋಶ ವ್ಯಕ್ತವಾಗಿತ್ತು.

ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ಪೊಲೀಸರು ಅವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ

ಮೊದಲ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಪಾದ್ರಿ
ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್‌ನಲ್ಲಿ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಪಾದ್ರಿಯನ್ನು ಪೊಲೀಸರು ಸಕಲೇಶಪುರದಲ್ಲಿ ಪತ್ತೆಹಚ್ಚಿ ಬಂಧಿಸಿದ್ದರು. ಬಳಿಕ ಅಕ್ಟೋಬರ್ 29ರಂದು ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ತನಿಖೆಗೆ ಸಹಕರಿಸಬೇಕು, ಸಾಕ್ಷ್ಯಗಳನ್ನು ನಾಶಪಡಿಸಬಾರದು ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿತ್ತು
ಮಕ್ಕಳ ಕುಟುಂಬಗಳಿಗೆ ಬೆದರಿಕೆ ಹಾಕಿದ ಆರೋಪ!
ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಮುಂದಾಗಿದ್ದ ಕೆಲವು ಮಕ್ಕಳ ಕುಟುಂಬಗಳ ಮೇಲೆ ಒತ್ತಡ ಹೇರಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಪೊಲೀಸ್ ಠಾಣೆ ಮತ್ತು ನ್ಯಾಯಾಲಯಕ್ಕೆ ಪದೇಪದೇ ಅಲೆದಾಡಬೇಕಾಗುತ್ತದೆ, ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಹುದು ಎಂಬ ರೀತಿಯಲ್ಲಿ ಒತ್ತಡ ಹೇರಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ಆರೋಪಗಳ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂಬ ಒತ್ತಾಯ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *