ನಿರುದ್ಯೋಗಿಗಳಿಗೆ ಸುವರ್ಣಾವಕಾಶ, ಮಂಗಳೂರಿನಲ್ಲಿ ಬೃಹತ್ ಜಾಬ್ ಮೇಳ!

ನಿರುದ್ಯೋಗಿಗಳಿಗೆ ಸುವರ್ಣಾವಕಾಶ, ಮಂಗಳೂರಿನಲ್ಲಿ ಬೃಹತ್ ಜಾಬ್ ಮೇಳ!

ಮಂಗಳೂರಿನಲ್ಲಿ ನವೆಂಬರ್ 30ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಡಿ.ಕೆ. ಶಿವಕುಮಾರ್ ಉದ್ಘಾಟನೆ ಮಾಡಲಿದ್ದು, 200ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ.

ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ನವೆಂಬರ್ 30ರಂದು ಮಂಗಳೂರಿನಲ್ಲಿ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಆವರಣದಲ್ಲಿ ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಮೆಗಾ ಉದ್ಯೋಗ ಮೇಳ ನಡೆಯಲಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಲಿದ್ದಾರೆ.

ಈ ವಿಭಾಗೀಯ ಮಟ್ಟದ ಉದ್ಯೋಗ ಮೇಳದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳು ಪಾಲ್ಗೊಳ್ಳಬಹುದಾಗಿದೆ.

ಮೇಳದಲ್ಲಿ ಸುಮಾರು 200ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, 10 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಇಂಜಿನಿಯರಿಂಗ್, ಪಾಲಿಟೆಕ್ನಿಕ್, ಐಟಿಐ , ಪದವಿ, ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿವೆ.
ವಿಶೇಷ ಸೂಚನೆ: ಕೌಶಲ್ಯಯುತ ಹಾಗೂ ಕೌಶಲ್ಯರಹಿತ ಅಭ್ಯರ್ಥಿಗಳ ಜೊತೆಗೆ ಯಾವುದೇ ನಿರ್ದಿಷ್ಟ ವಿದ್ಯಾರ್ಹತೆ ಇಲ್ಲದವರಿಗೂ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ.

ಉಚಿತ ಸೌಲಭ್ಯಗಳ ವ್ಯವಸ್ಥೆ
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೋಂದಾಯಿತ ಅಭ್ಯರ್ಥಿಗಳು, ಯುವನಿಧಿ ಯೋಜನೆಯ ಫಲಾನುಭವಿಗಳು ಹಾಗೂ ಇತರ ಎಲ್ಲಾ ಆಸಕ್ತರು ಈ ಮೇಳದ ಸದುಪಯೋಗ ಪಡೆದುಕೊಳ್ಳಬಹುದು. ದೂರದ ಊರುಗಳಿಂದ ಬರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಆಯೋಜಕರು ಉಚಿತ ಬಸ್ ಸೌಲಭ್ಯ, ಪಾಕಿರ್ಂಗ್ ವ್ಯವಸ್ಥೆ, ಬೆಳಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

ನವೆಂಬರ್ 30ರಂದು ಬೃಹತ್ ಉದ್ಯೋಗ ಮೇಳ
ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಯೋಗದಲ್ಲಿ ನವೆಂಬರ್ 30ರಂದು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಆವರಣದಲ್ಲಿ ಕರಾವಳಿ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಕುರಿತು ನವೆಂಬರ್ 18ರಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ.

ಭಾಗವಹಿಸುವ ನಿರೀಕ್ಷೆಯಿರುವ ಕಂಪನಿಗಳು 200+

ಉದ್ಯೋಗಾಕಾಂಕ್ಷಿಗಳು 10,000+

ಉದ್ಯೋಗ ವಿನಿಮಯ ಕೇಂದ್ರದ ನೋಂದಣಿ 10,089

ಯುವನಿಧಿ ನೋಂದಾಯಿತ ಫಲಾನುಭವಿಗಳು 8708

ಈ ಉದ್ಯೋಗ ಮೇಳದಲ್ಲಿ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ 200ಕ್ಕೂ ಹೆಚ್ಚು ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ. ಕೌಶಲ್ಯ ಹೊಂದಿರುವ ಹಾಗೂ ಕೌಶಲ್ಯರಹಿತ ಅಭ್ಯರ್ಥಿಗಳಿಗೂ ಉದ್ಯೋಗಾವಕಾಶ ಕಲ್ಪಿಸಲಾಗುತ್ತದೆ

ಅಭ್ಯರ್ಥಿಗಳಿಗೆ ಊಟದ ವ್ಯವಸ್ಥೆ
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಊಟೋಪಚಾರದ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ. ಜಿಲ್ಲಾ ಆಡಳಿತ, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ ಹಾಗೂ ಕೈಗಾರಿಕಾ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ

ಅಭ್ಯರ್ಥಿಗಳು ಸಿದ್ಧಪಡಿಸಿಕೊಳ್ಳಬೇಕಾದ ದಾಖಲೆಗಳು
ಉದ್ಯೋಗ ಮೇಳಕ್ಕೆ ತೆರಳುವ ಅಭ್ಯರ್ಥಿಗಳು ಆಧಾರ್ ಕಾರ್ಡ್, ನವೀಕರಿಸಿದ ರೆಸ್ಯೂಮ್, ವಿದ್ಯಾರ್ಹತೆಯ ಅಂಕಪಟ್ಟಿಗಳು, ಪ್ರಮಾಣಪತ್ರಗಳು, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಅನುಭವ ಪ್ರಮಾಣಪತ್ರಗಳಿದ್ದಲ್ಲಿ ಅವುಗಳನ್ನು ಸಿದ್ಧಪಡಿಸಿಕೊಳ್ಳುವುದು ಉತ್ತಮ.

Leave a Reply

Your email address will not be published. Required fields are marked *