ಬೆಂಗಳೂರು, ಡಿ.12 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕೆಲವೆಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ರಾಜ್ಯದ 9 ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಕೆಯಾಗಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ..
No Ads
Log in to write reviews