No Ads

‘ಸ್ವಾಮಿ ಅಯ್ಯಪ್ಪ’ನ ಭಕ್ತರಿಗೆ ಗುಡ್ ನ್ಯೂಸ್…!

India 2024-10-28 16:58:05 88
post

ಯೆಸ್.. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶಬರಿಮಲೈ ಅಯ್ಯಪ್ಪನ ಭಕ್ತರಿಗೆ ಸಿಹಿಸುದ್ದಿ ನೀಡಿದೆ. ವಿಮಾನದ ಮೂಲಕ ಅಯ್ಯಪ್ಪ ಭಕ್ತರು ಇರುಮುಡಿಯನ್ನ ಶಬರಿಮಲೈಗೆ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದ್ದು, ಕೇಂದ್ರ  ಸರ್ಕಾರ ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಮಾಹಿತಿಯಿದೆ. ಈ ಮೊದಲು ಅಯ್ಯಪ್ಪ ಮಾಲಾಧಾರಿಗಳು ಇರುಮುಡಿಯನ್ನು ವಿಮಾನದಲ್ಲಿ ತೆಗೆದುಕೊಂಡು ಹೋಗಲು ಅವಕಾಶ ಇರಲಿಲ್ಲ. ಪ್ರಸ್ತುತ ಕೇಂದ್ರ ಬಿಜೆಪಿ ಸರ್ಕಾರ ಅನುಮತಿ ನೀಡಿದ್ದು, ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳಲ್ಲಿ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಲು ಅವಕಾಶ ನೀಡಲಾಗಿದೆ. ಅಯ್ಯಪ್ಪ ಭಕ್ತರು ಇರುಮುಡಿ ತೆಗೆದುಕೊಂಡು ಹೋಗುವಾಗ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ಮಾಡಲಾಗುತ್ತದೆ.  ತಪಾಸಣೆಗಳನ್ನ ಮಾಡಿದ ನಂತರ ಇರುಮುಡಿ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗುತ್ತದೆ.  ವಿಮಾನ ಮೂಲಕ ಅಯ್ಯಪ್ಪ ಸ್ವಾಮಿ ಭಕ್ತರು ಪ್ರಯಾಣ ಮಾಡುವಾಗ ನಿಯಮದಂತೆ ಇರುಮುಡಿಯನ್ನು ಕೈಯಿಂದ ತೆಗೆದುಕೊಂಡು ಹೋಗಲು ಅನುಮತಿ ಇರಲಿಲ್ಲ. ಆದರೆ ಈಗ ಇರುಮುಡಿಯನ್ನು ಭಕ್ತರು ಕೈಯಲ್ಲೇ ಹಿಡಿದುಕೊಂಡು ವಿಮಾನದಲ್ಲಿ ಪ್ರಯಾಣಿಸಬಹುದು. ಈ ಅನುಮತಿಯು ಇಂದಿನಿಂದ 2025ರ ಜನವರಿವರೆಗೆ ಇರುತ್ತದೆ. ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಯ ಅವಧಿಯಲ್ಲಿ ಇರುಮುಡಿಯಲ್ಲಿ ತೆಂಗಿನಕಾಯಿ ಸಾಗಿಸಲು ವಿನಾಯಿತಿ ನೀಡಲಾಗಿದೆ ಅಂತಾ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

No Ads
No Reviews
No Ads

Popular News

No Post Categories
Sidebar Banner
Sidebar Banner