No Ads

ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ ಕನ್ನಡದಲ್ಲೇ ಪ್ರಧಾನಿ ಮೋದಿ ಶುಭಾಶಯ

India 2024-11-01 11:45:27 106
post

ಬೆಂಗಳೂರು, ನವೆಂಬರ್, 01 : ನಾಡಿನಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಈ ವಿಶೇಷ ಸಂಧರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ” ಎಂದು ಹೇಳಿದ್ದಾರೆ.  

No Ads
No Reviews
No Ads

Popular News

No Post Categories
Sidebar Banner
Sidebar Banner