ನೇಹಾ ಹಿರೇಮಠ (Neha Hiremath) ಕೊಲೆ ಪ್ರಕರಣ ರಾಜ್ಯ ಮಾತ್ರವಲ್ಲದೆ ದೇಶದಲ್ಲಿ ಸಾಕಷ್ಟು ಸುದ್ದಿಯಾಗಿದೆ. ನಿರಂಜನ ಹಿರೇಮಠ ಅವರ ನಿವಾಸಕ್ಕೆ ಮಂಗಳವಾರ ಹೆಚ್.ಕೆ ಪಾಟೀಲ್ ಭೇಟಿ ನೀಡಿ, ಸಾಂತ್ವನ ಹೇಳಿದರು. ಈ ವೇಳೆ ಹೆಚ್.ಕೆ.ಪಾಟೀಲ್ ಅವರು ಮುಖ್ಯಮಂತ್ರಿಗಳಿಗೆ ಕರೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು (ಏ.23) ನೇಹಾ ತಂದೆ ನಿರಂಜನ್ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ವೆರಿ ಸಾರಿ ಎಂದಿದ್ದಾರೆ. ಕೊಲೆ ನಡೆದು ಆರು ದಿನಗಳು ಕಳೆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಅಂತ ನೇಹಾ ತಂದೆ ನಿರಂಜನ ಹಿರೇಮಠ ಆರೋಪಿಸಿದ್ದರು. ಅಲ್ಲದೆ ಸಿಎಂ, ಡಿಸಿಎಂ ಮತ್ತು ಗೃಹ ಸಚಿವರು “ವೈಯಕ್ತಿಕ ವಿಚಾರವಾಗಿ” ನಡೆದ ಕೊಲೆ ಎಂದು ಹೇಳುವ ಮೂಲಕ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಇನ್ನು ತಮ್ಮದೇ ಪಕ್ಷದ ಪಾಲಿಕೆ ಸದಸ್ಯನ ಪುತ್ರಿಯ ಕೊಲೆಯಾಗಿದ್ದರೂ ಮುಖ್ಯಮಂತ್ರಿಗಳು ನಿರಂಜನ ಹಿರೇಮಠ ಮನೆಗೆ ಭೇಟಿ ನೀಡದೆ ಇದ್ದಿದ್ದು, ಕೆರಳುವಂತೆ ಮಾಡಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರಂಜನ ಹಿರೇಮಠ ಅವರ ಬಳಿ ಕ್ಷಮೆ ಕೇಳಿದ್ದು ಮಾತ್ರ ನಿಗೂಢವಾಗಿದೆ. ಹೆಚ್.ಕೆ ಪಾಟೀಲ್ ಮಾತನಾಡಿ, ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿದ್ದಕ್ಕೆ ಸಮಾಧಾನ ಇದೆ. ವಿಶೇಷ ನ್ಯಾಯಾಲಯ ಸ್ಥಾಪನೆ ವಿಚಾರಕ್ಕೂ ಸಮಾಧಾನ ಇದೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳಿದರು.
‘ವೆರಿ ಸಾರಿ’: ನೇಹಾ ಹಿರೇಮಠ ತಂದೆ ನಿರಂಜನ್ ಜತೆ ಫೋನ್ ನಲ್ಲಿ ಸಿಎಂ ಸಿದ್ದರಾಮಯ್ಯ?
No Ads
Log in to write reviews