ಲೈವ್ | ಕರ್ನಾಟಕ ರಾಜ್ಯ ಸುದ್ದಿ: ಆದಿ ಚುಂಚನಗಿರಿ ಮಠದ ಡಾ. ನಿರ್ಮಲಾನಂದ ಸ್ವಾಮೀಜಿಗೆ ವಿಟಿಯು ಗೌರವ ಡಾಕ್ಟರೆಟ್. ಬೆಳಗಾವಿ : 'ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವ ಆ.1ರಂದು ವಿಟಿಯು ಆವರಣದ ಡಾ. ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುವುದು' ಎಂದು ವಿಟಿಯು ಕುಲಪತಿ ಪ್ರೊ.ಎಸ್. ವಿದ್ಯಾಶಂಕರ ತಿಳಿಸಿದ್ದಾರೆ. ಶುಕ್ರವಾರ ವಿಟಿಯು ಸೆನೆಟ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ' 23ನೇ ಘಟಿಕೋತ್ಸವದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಡಾ. ನಿರ್ಮಲಾನಂದ ಸ್ವಾಮೀಜಿ, ರಾಷ್ಟ್ರೀಯ ಶಿಕ್ಷಣ ಸಮಿತಿಯ ಗೌರವ ಕಾರ್ಯದರ್ಶಿ ಡಾ.ಎ.ವಿ.ಎಸ್ ಮೂರ್ತಿ ಹಾಗೂ ಮೈಸೂರು ಮೆಕ್ರ್ಯಾನ ಟೈಲ್ ಕಂಪನಿ ಅಧ್ಯಕ್ಷ ಎಚ್.ಎನ್.ಶೆಟ್ಟಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುವುದು' ಎಂದರು.
ಲೈವ್ | ಕರ್ನಾಟಕ ರಾಜ್ಯ ಸುದ್ದಿ: ಆದಿ ಚುಂಚನಗಿರಿ ಮಠದ ಡಾ. ನಿರ್ಮಲಾನಂದ ಸ್ವಾಮೀಜಿಗೆ ವಿಟಿಯು ಗೌರವ ಡಾಕ್ಟರೆಟ್
No Ads
Log in to write reviews