No Ads

ನೆಲಕ್ಕುರುಳಿದ 120 ಅಡಿ ಎತ್ತರದ ತೇರು: ಜಾತ್ರೆಯಲ್ಲಿ ಅವಘಡ

ಕರ್ನಾಟಕ 2024-04-06 16:20:31 64
post

ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅವಘಡ ಸಂಭವಿಸಿದೆ. ಹತ್ತಾರು ಗ್ರಾಮಗಳಿಂದ ಮದ್ದೂರಮ್ಮ ಜಾತ್ರೆಗೆ ಎತ್ತುಗಳು, ಟ್ರ್ಯಾಕ್ಟರ್​ಗಳ ಮೂಲಕ ತೇರು ಎಳೆದುಕೊಂಡು ಬರಲಾಗುತ್ತದೆ. ಹೀಲಲಿಗೆ ಗ್ರಾಮದಿಂದ ಹುಸ್ಕೂರಿಗೆ ತೇರು ಬರುತ್ತಿರುವಾಗ ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಎಡಭಾಗಕ್ಕೆ ವಾಲಿಕೊಂಡು ನಿಧಾನವಾಗಿ ತೇರು ನೆಲಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.  

No Ads
No Reviews
No Ads

Popular News

No Post Categories
Sidebar Banner
Sidebar Banner