No Ads

1995ರ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ, ದೇಶದ ಪಾಲಿಗೆ ಮಹತ್ವದ ತಿರುವು.. ಮೋದಿ ಸಂತಸ

India 2025-04-04 12:27:57 95
post

1995ರ ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆ ,ಮತ್ತು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆಯು ಸಂಸತ್ತಿನಲ್ಲಿ ಅಂಗೀಕಾರ ಪಡೆದಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಅಕೌಂಟ್‌ನಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, "ಇದು ದೇಶದ ಪಾಲಿಗೆ ಒಂದು ಮಹತ್ವದ ತಿರುವು.." ಎಂದು ಬಣ್ಣಿಸಿದ್ದಾರೆ.

"ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮತ್ತು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ ಅಂಗೀಕಾರಗೊಂಡಿರುವುದು ನಿಜಕ್ಕೂ ಸಂತಸದ ವಿಷಯ. ಇದು ದೇಶದ ಸಾಮಾಜಿಕ-ಆರ್ಥಿಕ ನ್ಯಾಯ, ಪಾರದರ್ಶಕತೆ ಮತ್ತು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ
ಪ್ರಯತ್ನದಲ್ಲಿ ನಾವು ಇಟ್ಟಿರುವ ಪ್ರಮುಖ ಹೆಜ್ಜೆ.." ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

"ಈ ಹೊಸ ಕಾನೂನು ದೀರ್ಘಕಾಲದಿಂದ ಅವಕಾಶ ವಂಚಿತರಾದವರಿಗೆ ಸಹಾಯ ಮಾಡುತ್ತದೆ. ಸಂಸತ್ತಿನ ಸದಸ್ಯರು ಮತ್ತು ಈ ಮಸೂದೆಗಳ ತಿದ್ದುಪಡಿಯಲ್ಲಿ ಸಲಹೆ ನೀಡಿದ ಜನರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ವಕ್ಫ್ ವ್ಯವಸ್ಥೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಿ, ಮುಸ್ಲಿಂ ಮಹಿಳೆಯರು ಮತ್ತು ಬಡ ಮುಸ್ಲಿಮರ ಹಿತಾಸಕ್ತಿಗಳನ್ನು ಕಾಪಾಡಲು ಈ ಕಾನೂನು ಸಹಾಯ ಮಾಡುತ್ತದೆ. ಈ ಕಾನೂನು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಮತ್ತು ಎಲ್ಲರಿಗೂ ನ್ಯಾಯ ಒದಗಿಸುತ್ತದೆ.." ಎಂದು ಪ್ರಧಾನಿ ಮೋದಿ ಭರವಸೆ ವ್ಯಕ್ತಪಡಿಸಿದ್ದಾರೆ.

No Ads
No Reviews
No Ads

Popular News

No Post Categories
Sidebar Banner
Sidebar Banner