No Ads

ಪಾಳುಬಿದ್ದ ಮನೆಯಲ್ಲಿದ್ದ ಹೆಣ್ಣು ಮಗು;ರಕ್ಷಿಸಿ ಮಾನವೀಯತೆ ಮೆರೆದ ಖ್ಯಾತ ನಟಿಯ ಸಹೋದರಿ

India 2025-04-22 11:59:17 81
post

ಮಾಜಿ ಭಾರತೀಯ ಸೇನಾ ಅಧಿಕಾರಿ ಖುಷ್ಬೂ ಪಟಾನಿ(Khushboo Patani) ಬರೇಲಿ (bareilly) ಯಲ್ಲಿರುವ ತನ್ನ ಮನೆಯ ಹಿಂಬದಿಯಲ್ಲಿರುವ ಪಾಳುಬಿದ್ದ ಕಟ್ಟಡ ವೊಂದರಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಹೆಣ್ಣು ಮಗುವನ್ನು ರಕ್ಷಿಸಿ, ಪೊಲೀಸರಿಗೆ ಒಪ್ಪಿಸಿದ್ದು ಇವರ ಈ ಕೆಲಸಕ್ಕೆ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ. Khushboo patani ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ಖುಷ್ಬೂ ಪಟಾನಿಯವರು ಪಾಳು ಬಿದ್ದ ಕಟ್ಟಡವನ್ನು ಪ್ರವೇಶಿಸಿದ ವೇಳೆ ಒಂಬತ್ತರಿಂದ ಹತ್ತು ತಿಂಗಳ ಹೆಣ್ಣು ಮಗುವೊಂದು ಕೊಳಕಿನಲ್ಲಿ ಬಿದ್ದು ಅಳುತ್ತಿರುವುನ್ನು ಕಾಣಬಹುದು. ಆ ತಕ್ಷಣವೇ ಅದನ್ನು ಎತ್ತಿಕೊಂಡು ಅಲ್ಲಿಂದ ಬಂದಿರುವುದನ್ನು ಕಾಣಬಹುದು.

ಮತ್ತೊಂದು ವಿಡಿಯೋದಲ್ಲಿ ಖುಷ್ಬೂ ಪಟಾನಿ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮತ್ತು ಇತರ ಅಧಿಕಾರಿಗಳನ್ನು ಟ್ಯಾಗ್ ಮಾಡಿ, ‘ಜಾಕೋ ರಾಖೆ ಸೈಯಾನ್, ಮಾರ್ ಸಕೆ ನಾ ಕೋಯ್’ ಎಂಬ ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮಗುವಿಗೆ ‘ರಾಧಾ’ ಎಂದು ನಾಮಕರಣ ಮಾಡಿದ್ದು, ಹೆಣ್ಣು ಮಕ್ಕಳ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮಗುವಿನ ಭವಿಷ್ಯವನ್ನು ಸುರಕ್ಷಿತವಾಗಿಡಲು ತಾವು ಖಾತರಿಪಡಿಸುವುದಾಗಿ ಖುಷ್ಬೂ ಭರವಸೆ ನೀಡಿದ್ದಾರೆ.

ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ದಿಶಾ ಪಟಾನಿ ಸೇರಿದಂತೆ ಹಲವು ಬಾಲಿವುಡ್ ಸೆಲೆಬ್ರಿಟಿಗಳು ಖುಷ್ಬೂ ಅವರ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ. ಬಳಕೆದಾರರೊಬ್ಬರು, ದೇವರ ಆಶೀರ್ವಾದವು ಆ ಮಗುವಿನ ಮೇಲೆ ಹಾಗೂ ನಿಮ್ಮ ಮೇಲೆ ಇರಲಿ ಎಂದಿದ್ದಾರೆ. ಇನ್ನೊಬ್ಬರು, ನಿಜಕ್ಕೂ ಈ ದೃಶ್ಯವು ನೋಡಿದಾಗ ಕಣ್ಣಲ್ಲಿ ನೀರು ಬಂದಿದೆ. ಆ ಮಗುವನ್ನು ರಕ್ಷಿಸಲು ಆ ದೇವರೇ ನಿಮ್ಮನ್ನು ಅಲ್ಲಿಗೆ ಕಳುಹಿಸಬೇಕು ಎಂದಿದ್ದಾರೆ. ಮತ್ತೊಬ್ಬರು, ನಿಮ್ಮ ಧೈರ್ಯದಿಂದ ಆ ಮಗುವಿನ ಜೀವ ಉಳಿಯಿತು ಎಂದು ಕಾಮೆಂಟ್ ಮಾಡಿದ್ದಾರೆ.

ಖುಷ್ಬೂ ಪಟಾನಿ ಈ ಹೆಣ್ಣು ಮಗುವನ್ನು ರಕ್ಷಿಸಿದ ಬಳಿಕ ತಕ್ಷಣವೇ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ನೀಡಿದ ಪೊಲೀಸರು ಪೋಷಕರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಮಗುವಿನ ತಾಯಿಯು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ. ಈಕೆಯನ್ನು ವಿಚಾರಣೆ ನಡೆಸಿದ ವೇಳೆಯಲ್ಲಿ, ರೈಲ್ವೆ ಸ್ಟೇಷನ್‌ನಲ್ಲಿ ಮಗು ಜೋರಾಗಿ ಅಳುತ್ತಿತ್ತು. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬನು ಮಗುವನ್ನು ಆಡಿಸುವ ನೆಪದಲ್ಲಿ ಬಂದು ತಾಯಿ ಕೈಯಿಂದ ತನ್ನ ಬಳಿ ಹಿಡಿದುಕೊಂಡು ಎಂದು ಓಡಿ ಹೋಗಿದ್ದಾನೆ ಎಂದು ಹೇಳಿದ್ದಾರೆ. ಸದ್ಯಕ್ಕೆ ಈ ಮಗುವನ್ನು ಕದ್ದ ವ್ಯಕ್ತಿಯನ್ನು ಪತ್ತೆಹಚ್ಚುವ ಸಲುವಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

No Ads
No Reviews
No Ads

Popular News

No Post Categories
Sidebar Banner
Sidebar Banner