No Ads

ಮಗಳ ಬಳಿ ಅಮ್ಮ ಎಲ್ಲಿ ಎಂದು ಕೇಳಿದಕ್ಕೆ ಮನನೊಂದ ವ್ಯಕ್ತಿ , ಮಾಡಿದ್ದು ಮಹಾ ಘೋರ ಕೃತ್ಯ

ಜಿಲ್ಲೆ 2025-04-02 15:15:58 237
post

ಚಿಕ್ಕಮಗಳೂರು: ಶಾಲೆಯಲ್ಲಿ ಮಗಳ ಜೊತೆ ಅಮ್ಮ ಎಲ್ಲಿ ಎಂದು ಕೇಳುತ್ತಾರೆ ಎಂದು ಮನನೊಂದ ವ್ಯಕ್ತಿಯೊಬ್ಬ ತನ್ನ 7 ವರ್ಷದ ಮಗಳು ಸೇರಿ ಒಂದೇ ಮನೆಯಲ್ಲಿದ್ದ ಮೂವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು(Chikkamagaluru) ತಾಲೂಕಿನ ಖಾಂಡ್ಯಾ(Khandya) ಸಮೀಪದ ಮಾಗಲು ಗ್ರಾಮದಲ್ಲಿ ನಡೆದಿದೆ.

ಅತ್ತೆ ಜ್ಯೋತಿ(50), ನಾದಿನಿ ಸಿಂಧು(26), ಮಗಳು ಖುಷಿ(7) ಮೃತ ದುರ್ದೈವಿಗಳು. ಮಾಗಲು ಗ್ರಾಮದ ರತ್ನಾಕರ್ ಎಂಬವನು ನಾಡಬಂದೂಕಿನಿಂದ ಮೂವರನ್ನು ಭೀಕರ ಹತ್ಯೆ ಮಾಡಿ, ಆತನೂ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರತ್ನಾಕರ್ ಹೆಂಡತಿ ಬಿಟ್ಟು ಹೋಗಿದ್ದರಿಂದ ಮನನೊಂದು ಈ ದುಷ್ಕೃತ್ಯ ನಡೆಸಿದ್ದಾನೆ.

ಶಾಲೆಯಲ್ಲಿ ಸಹಪಾಠಿಗಳು ನಿಮ್ಮ ಅಮ್ಮ ಎಲ್ಲಿ ಎಂದು ಕೇಳುತ್ತಾರೆ ಎಂದು ಅಪ್ಪ ರತ್ನಾಕರ್ ಬಳಿ ಮಗಳು ಅಳಲು ತೋಡಿಕೊಂಡಿದ್ದಳು. ಇದರಿಂದ ಮನನೊಂದಿದ್ದ ರತ್ನಾಕರ್ ಮಂಗಳವಾರ ರಾತ್ರಿ 10 ಗಂಟೆ ವೇಳೆಗೆ ಮನೆಗೆ ತೆರಳಿ, ಅತ್ತೆ, ನಾದಿನಿ ಹಾಗೂ ಮಗಳನ್ನು ನಾಡಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ.

ಹತ್ಯೆಯ ಬಳಿಕ ರತ್ನಾಕರ್, ಸೆಲ್ಫಿ ವಿಡಿಯೋ ಮಾಡಿ ಸಂಸಾರದ ನೋವನ್ನು ತೋಡಿಕೊಂಡಿದ್ದಾನೆ. ನನ್ನ ಹೆಂಡತಿ ಮೋಸ ಮಾಡಿ ಹೋಗಿ 2 ವರ್ಷ ಆಯ್ತು. ಮಗಳನ್ನು ಬೇಡ ಅಂತ ಬಿಟ್ಟು ಹೋಗಿದ್ದಾಳೆ. ಈಗ ಶಾಲೆಯಲ್ಲಿ ನನ್ನ ಮಗಳಿಗೆ ಆಕೆಯ ಸ್ನೇಹಿತರು ನಿನ್ನ ಅಮ್ಮ ಎಲ್ಲಿ ಎಂದು ಕೇಳುತ್ತಾರೆ. ಮಗಳು ಆಲ್ಬಂನಿಂದ ಅಮ್ಮನ ಫೋಟೋ ತೆಗೆದುಕೊಂಡು ಹೋಗಿ ಈಕೆಯೇ ನನ್ನ ಅಮ್ಮ ಅಂತ ತೋರಿಸಿದ್ದಾಳೆ ಎಂದು ವಿಡಿಯೋದಲ್ಲಿ ರತ್ನಾಕರ್ ನೋವನ್ನು ವ್ಯಕ್ತಪಡಿಸಿದ್ದಾನೆ.

ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನು ಅದೇ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಯಲ್ಲಿ ಮೃತ ಸಿಂಧು ಗಂಡ ಅವಿನಾಶ್ ಕಾಲಿಗೂ ಗುಂಡೇಟು ತಗುಲಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ(Balehonnur Police Station) ಪ್ರಕರಣ ದಾಖಲಾಗಿದೆ.

 

No Ads
No Reviews
No Ads

Popular News

No Post Categories
Sidebar Banner
Sidebar Banner