No Ads

ಭೀಕರ ಅಪಘಾತ; ಓಂ ಶಕ್ತಿ ದೇವಾಲಯ ಪ್ರವಾಸಕ್ಕೆ ತೆರಳಿದ್ದ KSRTC ಬಸ್ - 5 ಮಂದಿ ಸಾವು!

ಜಿಲ್ಲೆ 2025-01-09 13:05:35 542
post

ಕೋಲಾರ: ತಮಿಳುನಾಡಿನ ರಾಣಿಪೇಟೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕರ್ನಾಟಕದ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 5 ಮಂದಿ ಸಾವಿಗೀಡಾಗಿದ್ದಾರೆ.

 

ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ನಲ್ಲೂರು ಗ್ರಾಮದಿಂದ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ 50 ಜನ ಗ್ರಾಮಸ್ಥರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರವಾಸ ಹೋಗಿ ವಾಪಸ್ಸಾಗುತ್ತಿದ್ದರು. ಇತ್ತ ಶ್ರೀನಿವಾಸಪುರ ತಾಲ್ಲೂಕು ಸೀಗೆಹಳ್ಳಿ ಗ್ರಾಮದಿಂದ ತರಕಾರಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್‌ (ಟೆಂಪೋ) ಚೆನೈಗೆ ಹೊರಟಿತ್ತು. ತಮಿಳುನಾಡಿನ ರಾಣಿಪೇಟೆ ಬಳಿ ಮುಖಾಮುಖಿ ಡಿಕ್ಕಿಯಾಗಿ ಅಪಘಾತವಾಗಿದೆ.

ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಕ್ಯಾಂಟರ್ ನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಹಾಗೂ ಮತ್ತೊಬ್ಬರು ಎಂದು ಗುರುತಿಸಲಾಗಿದೆ. ಇನ್ನು ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮುಳಬಾಗಿಲು ತಾಲ್ಲೂಕು ನೆರ್ನಹಳ್ಳಿ ಬಾಬು ಹಾಗೂ
ಬಸ್ ನಲ್ಲಿದ್ದ ಓರ್ವ ಮಹಿಳೆ ನಲ್ಲೂರು ಗ್ರಾಮದ ಸರಸ್ವತಮ್ಮ ಸ್ಥಿತಿ ಗಂಭೀರವಾಗಿದ್ದು, ವೇಲೂರು ಸಿಎಂಸಿ ಆಸ್ಪತ್ರೆ, ರತ್ನಗಿರಿ ಮೆಡಿಕಲ್ ಕಾಲೇಜಿನಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

 

 

No Ads
No Reviews
No Ads

Popular News

No Post Categories
Sidebar Banner
Sidebar Banner