ನಟ ಶಿವರಾಜ್ ಕುಮಾರ್ ಖಾಸಗಿ ಆಸ್ಪತ್ರೆಗೆ ದಾಖಲು ಬೆಂಗಳೂರು: ಚುನಾವಣೆಯ ಪ್ರಚಾರ ಹಾಗೂ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿ ಆಗಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಶಿವಣ್ಣನವರಿಗೆ ರೆಗ್ಯುಲರ್ ಚೆಕ್ ಅಪ್ ಮಾಡಲಾಗಿದೆ. ಇತ್ತೀಚೆಗೆ ನಟ ಶಿವರಾಜ್‌ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಚುನಾವಣೆಯ ಪ್ರಚಾರ ಕೈಗೊಂಡಿದ್ದರು. ಪತ್ನಿ ಗೀತಾ ಶಿವರಾಜ್‌ಕುಮಾರ್ ಪರ ಬೈಕ್ ಱಲಿ ಹಾಗೂ ಬೃಹತ್ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗಿಯಾಗಿದ್ದರು. ರಣ ಬಿಸಿನಲ್ಲೇ ಬಿರುಸಿನ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಶಿವಣ್ಣಗೆ ಸದ್ಯ ಆರೋಗ್ಯ ತಪಾಸಣೆ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಪ್ರಚಾರದ ಜೊತೆಗೆ ಶಿವರಾಜ್ ಕುಮಾರ್ ಅವರ ಅಭಿನಯದ ಭೈರತಿ ರಣಗಲ್ ಸಿನಿಮಾದ ಶೂಟಿಂಗ್ ಕೂಡ ನಡೀತಿದೆ. ಈ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಅವರನ್ನ ವೈದ್ಯರು ರೆಗ್ಯುಲರ್ ಚೆಕ್ ಅಪ್ ಮಾಡಿದ್ದು, ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಚುನಾವಣೆಯ ಪ್ರಚಾರಕ್ಕೆ ಬ್ರೇಕ್ ಕೊಟ್ಟಿರುವ ಶಿವರಾಜ್ ಕುಮಾರ್ ಅವರು ಸದ್ಯ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ನಟ ಶಿವರಾಜ್ ಕುಮಾರ್ ಖಾಸಗಿ ಆಸ್ಪತ್ರೆಗೆ ದಾಖಲು
No Ads
Log in to write reviews