ಕಳೆದ 2 ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಒಂದು ಅವಹೇಳನಕಾರಿ ಪೋಸ್ಟ್ ಹರಿದಾಡುತ್ತಿದೆ. ನಟ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನ ಗುರಿಯಾಗಿಸಿ ಪೋಸ್ಟ್ ಮಾಡಲಾಗಿದ್ದು ತೀವ್ರ ಚರ್ಚೆಗೆ ಗುರಿಯಾಗಿದೆ. ಅಶ್ವಿನಿ ಪುನೀತ್ ರಾಜ್ಕುಮಾರ್ ವಿರುದ್ಧ ನಿಂದನಾತ್ಮಕ ಪೋಸ್ಟ್ ಮಾಡಿದವರಿಗೆ ಈಗ ಸಂಕಷ್ಟ ಎದುರಾಗಿದೆ.ಗಜಪಡೆ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರ ಬಗ್ಗೆ ನಿಂದನಾತ್ಮಕ ಪೋಸ್ಟ್ ಮಾಡಲಾಗಿತ್ತು. ಐಪಿಎಲ್‌ನಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಸೋಲಿಗೆ ಅಶ್ವಿನಿ ಅವರನ್ನು ಕರೆಸಿದ್ದೇ ಕಾರಣ ಎಂದು ಹೇಳಲಾಗಿತ್ತು. ಈ ಪೋಸ್ಟ್‌ಗೆ ಅಪ್ಪು ಫ್ಯಾನ್ಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್ಕುಮಾರ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಅಪ್ಪು ಅಭಿಮಾನಿಗಳು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇದೊಂದು ಸಹಿಸಲಾರದ ಕಿಡಿಗೇಡಿಗಳ ಕೃತ್ಯವಾಗಿದೆ. ಈ ಹಿನ್ನಲೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ದೂರಿನಲ್ಲಿ ಒತ್ತಾಯಿಸಲಾಗಿದೆ. ಕಳೆದ ಮಾರ್ಚ್ 19ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಅನ್‌ಬಾಕ್ಸ್ ಕಾರ್ಯಕ್ರಮ ಇತ್ತು. ಅನ್‌ಬಾಕ್ಸ್ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ಸೋಲಿಗೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಕರೆಸಿದ್ದಕ್ಕೂ ಹೋಲಿಕೆ ಮಾಡಿ ಕೆಟ್ಟದಾಗಿ ಪೋಸ್ಟ್ ಮಾಡಲಾಗಿದೆ. ಆರ್‌ಸಿಬಿ ತಂಡದ ಹೆಸರು ಬದಲಾವಣೆಯ ಪ್ರೋಮೋದಲ್ಲೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಅಭಿನಯಿಸಿದ್ದರು. ಈ ಹಿನ್ನೆಲೆಯಲ್ಲಿ ಪೋಸ್ಟ್ ಮಾಡಿರುವ ಗಜಪಡೆ ಎಂಬ ಫೇಸ್‌ಬುಕ್ ಪೇಜ್ ಈಗ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಅಶ್ವಿನಿ ಪುನೀತ್ ರಾಜ್ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್
No Ads
Log in to write reviews