No Ads

ಶಿಗ್ಗಾಂವ-ಸವಣೂರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಸೂಟಿ ಪ್ರಚಾರ

ಜಿಲ್ಲೆ 2024-04-18 15:33:04 91
post

ಧಾರವಾಡ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿದ್ದು ಬಿಟ್ಟರೆ ಬೇರೆ ಏನನ್ನೂ ಮಾಡಲಿಲ್ಲ. ಬೆಲೆ ಇಳಿಕೆ ಮಾಡುವಲ್ಲಿ ವಿಫಲವಾಯಿತು. ಬೆಲೆ ಏರಿಕೆಯಿಂದ ಬಡಕುಟುಂಬಗಳು ಜೀವನ ಮಾಡಲು ಗೋಳಾಡುವಂತೆ ಆಗಿದೆ. ಆದ್ದರಿಂದ ಬೆಲೆ ಏರಿಕೆ ಮಾಡಿದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಜನ ಈ ಬಾರಿಯ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕು ಎಂದು ಧಾರವಾಡ ಲೋಕಸಭೆಯ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಕರೆ ನೀಡಿದರು. ಬೆಳವಲಕೊಪ್ಪ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಧಾರವಾಡ ಲೋಕಸಭಾ ವ್ಯಾಪ್ತಿಯ ಶಿಗ್ಗಾಂವ-ಸವಣೂರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ತಾವೆಲ್ಲ ಬೆಂಬಲ ನೀಡಿ ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು. ಕ್ಯಾಲಕೊಂಡ, ಬನ್ನೂರ ಮತ್ತು ಕಬನೂರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಜನರು ಈ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ  ಹಾನಗಲ್ ಕ್ಷೇತ್ರದ ಶಾಸಕರಾದ ಶ್ರೀ ಶ್ರೀನಿವಾಸ ಮಾನೆ, ಶ್ರೀ ಯಾಸೀರ ಅಹ್ಮದ ಖಾನ ಪಠಾಣ, ಸೋಮಣ್ಣ ಬೇವಿನಮರದ, ಸಂಜೀವಕುಮಾರ ನೀರಲಗಿ, ಬಿ ಸಿ ಪಾಟೀಲ್, ಎಮ್ ಜೆ ಮುಲ್ಲಾ, ಶಿವಾನಂದ ರಾಮಗೇರಿ, ಗುಡ್ಡಪ್ಪ ಜಲ್ದಿ, ಮಹಾಂತೇಶ ಸಾಲಿ, ಗ್ರಾಮ ಪಂಚಾಯತ್ ವ್ಯಾಪ್ತಿಯ ಸದಸ್ಯರು ಮತ್ತು ಹಿರಿಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

No Ads
No Reviews
No Ads

Popular News

No Post Categories
Sidebar Banner
Sidebar Banner