17 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿಯಲ್ಲಿ ವಿವಾಹಿತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 10ನೇ ತರಗತಿ ಹುಡುಗ ನಾಪತ್ತೆಯಾದ ಬೆನ್ನಲ್ಲೇ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಘಟನೆ ಬೆಳಕಿಗೆ ಬಂದಿದೆ. ಮಹಿಳೆ ಪತ್ತೆ ಹಚ್ಚಿದ ಪೊಲೀಸರು 17 ವರ್ಷದ ಹುಡುಗನ ರಕ್ಷಣೆ ಮಾಡಿದ್ದಾರೆ.
ಇಬ್ಬರು ಮಕ್ಕಳು ಹಾಗೂ ಕುಟುಂಬದ ಜೊತೆಗಿದ್ದ ಈ ಮಹಿಳೆಗೆ 17ರ ಹುಡುಗನ ಮೇಲೆ ಪ್ರೀತಿ ಶುರುವಾಗಿದೆ. ಫೋನ್ ನಂಬರ್ ಪಡೆದು ಪ್ರತಿ ದಿನ ಕರೆ ಮಾಡಲು ಆರಂಭಿಸಿದ್ದಾಳೆ. ಹೀಗೆ ಹುಡುಗನ ಜೊತೆ ಪ್ರೀತಿ ಬೆಳೆಸಿಕೊಂಡಿದ್ದಳೆ. ಪತಿ ಮನೆಯಲ್ಲಿ ಇಲ್ಲದ ವೇಳೆ ಮನೆಗೆ ಕರೆಯಿಸುತ್ತಿದ್ದ ಹುಡುಗನ ಜೊತೆ ಅತ್ಯಾಪ್ತ ಸಮಯ ಕಳೆದಿದ್ದಾಳೆ. ಹುಡುಗನ ಪೋಷಕರು ಹಾಗೂ ಕುಟುಂಬಸ್ಥರಿಗೆ ಈ ರಿಲೇಶನ್‌ಶಿಪ್ ಸುಳಿವೇ ಇರಲಿಲ್ಲ.
ಶಾಲೆಗೆ ತೆರಳಿದ ಮಗ ರಾತ್ರಿಯಾದರೂ ಮನೆಗೆ ಮರಳಲೇ ಇಲ್ಲ. ಗಾಬರಿಗೊಂಡ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. ತಡ ರಾತ್ರಿಯಾಗುತ್ತಿದ್ದಂತೆ ಬಾಲಕ ಮಿಸ್ಸಿಂಗ್ ಅನ್ನೋದು ಖಚಿತವಾಗಿದೆ. ಹೀಗಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ತಡ ರಾತ್ರಿಯೇ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಬಾಲಕನ ಗೆಳೆಯರು ಸೇರಿದಂತೆ ಹಲವರಿಂದ ಮಾಹಿತಿ ಪಡೆದಿದ್ದಾರೆ. ಈ ವೇಳೆ ವಿನೋಧಿನಿ ಅನ್ನೋ ಮಹಿಳೆ ಜೊತೆ ಆಪ್ತವಾಗಿರುವುದಾಗಿ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಈ ಮಾಹಿತಿ ಆಧರಿಸಿದ ಪೊಲೀಸರು ಮರು ದಿನ ಬೆಳಗ್ಗೆ ತನಿಖೆ ತೀವ್ರಗೊಳಿಸಿದ್ದಾರೆ.
ವಿನೋಧಿನಿ ಮನೆಗೆ ತೆರಳಿದಾಗ ಆಕೆಯೂ ನಾಪತ್ತೆಯಾಗಿರುವುದಾಗಿ ಕುಟುಂಬಸ್ಥರು ಹೇಳಿದ್ದಾರೆ. ಅಲ್ಲಿಗೆ ಪೊಲೀಸರ ಅನುಮಾನ ಬಲವಾಗಿತ್ತು. ಟವರ್ ಲೊಕೇಶನ್ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಇತ್ತ ವಿನೋಧಿನಿ ತನ್ನ ಸಂಬಂಧಿಕರ ಮನೆಯನ್ನು ಬಾಡಿಗೆ ರೂಪದಲ್ಲಿ ಪಡೆದಿದ್ದಳು. ಈ ಬಾಡಿಗೆ ಮನೆಗೆ ಬಾಲಕನ ಕರೆದುಕೊಂಡು ಹೋಗಿದ್ದಾಳೆ. ಪ್ರೀತಿ ಹೆಸರಲ್ಲಿ ಬಾಲಕನ ಲೈಂಗಿಕವಾಗಿ ಬಳಸಿಕೊಂಡಿದ್ದಾಳೆ.
ಪೊಲೀಸರು ಮಹಿಳೆ ಪತ್ತೆ ಹಚ್ಚಿದ್ದಾರೆ. ವಿನೋಧಿನಿಯನ್ನು ಪೊಲೀಸರು ಅರೆಸ್ಟ್ ಮಾಡಿದರೆ ಬಾಲಕನ ರಕ್ಷಣೆ ಮಾಡಿದ್ದಾರೆ. ವಿನೋಧಿನಿ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಇತ್ತ ಬಾಲಕನ ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದಾರೆ. ಈ ಪ್ರಕರಣ ಇದೀಗ ತಿರುವಲ್ಲೂರಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಹಲವು ಪೋಷಕರು ಈ ಘಟನೆಯಿಂದ ಆಕಂಕಗೊಂಡಿದ್ದಾರೆ.
Log in to write reviews