ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇ ತುಕಾರಾಂ ಅವರು ಇಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದರು. ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಗೂ ಪಕ್ಷದ ಪ್ರಮುಖರೊಂದಿಗೆ ಅವರು ಮನೆಮನೆಗೆ ತೆರಳಿ ಮತಯಾಚಿಸಿದರು. ರಾಜ್ಯದ ಜನರಿಗಾಗಿ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ನುಡಿದಂತೆ ನಡೆದದ್ದು ಕಾಂಗ್ರೆಸ್. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಅವರು ಮನವಿ ಮಾಡಿದರು. ತಾಳೂರು, ಅಂಬೇಡ್ಕರ್ ಸರ್ಕಲ್ ಸೇರಿದಂತೆ ಹಲವೆಡೆ ಗ್ಯಾರೆಂಟಿ ಕಾರ್ಡ್ ಗಳನ್ನು ಹಂಚಿ ಭರ್ಜರಿ ಮತಬೇಟೆ ಮಾಡಿದರು. ಈ ತುಕಾರಾಂ ಅವರೊಂದಿಗೆ ಸಚಿವರಾದ ಬಿ ನಾಗೇಂದ್ರ, ಶಾಸಕರಾದ ನಾರಾ ಭರತ್ ರೆಡ್ಡಿ ಸಾಥ್ ಮತ್ತಿತರರು ಪ್ರಚಾರದಲ್ಲಿ ಭಾಗಿಯಾಗಿದ್ದರು.
ಬಳ್ಳಾರಿಯಲ್ಲಿ ಕಳೆಗಟ್ಟಿದ ಕಾಂಗ್ರೆಸ್ ಅಭ್ಯರ್ಥಿ ಇ ತುಕಾರಾಂ ಚುನಾವಣಾ ಪ್ರಚಾರ
No Ads
Log in to write reviews