No Ads

ಬೀದರ್ ಬೆನ್ನಲ್ಲೆ ಉಳ್ಳಾಲದಲ್ಲೂ ಹಾಡಹಗಲೇ ಬ್ಯಾಂಕ್ ದರೋಡೆ

ಜಿಲ್ಲೆ 2025-01-17 14:50:16 43
post

ಬೀದರ್ ಎಟಿಎಂ ದರೋಡೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲದಲ್ಲೂ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ. ಉಳ್ಳಾಲ ತಾಲೂಕಿನ ಕೆಸಿ ರೋಡ್​​ನ ಕೋಟೆಕಾರು ಬ್ಯಾಂಕ್​ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಹಾಡಹಗಲೇ ಬ್ಯಾಂಕ್​ಗೆ ನುಗಿದ ಐವರು ದರೋಡೆಕೋರರು ಕೃತ್ಯ ಎಸಗಿದ್ದಾರೆ. ಬಂದೂಕಿನಿಂದ ಬ್ಯಾಂಕ್​​ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ಹಣ, ಚಿನ್ನಾಭರಣದೊಂದಿಗೆ ಕಾರಿನಲ್ಲಿ ಪರಾರಿಯಾಗಿದ್ದಾರೆ.

 

ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು, ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಬ್ಯಾಂಕ್​ಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಬ್ಯಾಂಕ್​ ದರೋಡೆ ವಿಚಾರವಾಗಿ ಮಂಗಳೂರಿನಲ್ಲಿ ವಿಧಾನಸಭಾ ಸ್ಪೀಕರ್​ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಕೆಸಿ ರೋಡ್​​ನ ಕೋಟೆಕಾರು ಬ್ಯಾಂಕ್​​ನಲ್ಲಿ ಚಿನ್ನಾಭರಣ, ನಗದು ದರೋಡೆಯಾಗಿದೆ. ತಲ್ವಾರ್​, ಗನ್​ನಿಂದ ಬೆದರಿಸಿ ಬ್ಯಾಂಕ್​ ದರೋಡೆ ಮಾಡಿದ ಮಾಹಿತಿ ದೊರೆತಿದೆ. ಜನಸಂದಣಿ ಕಡಿಮೆ ಇರುವ ಸಮಯದಲ್ಲೇ ದರೋಡೆ ನಡೆಸಿದ್ದಾರೆ. ಆರೋಪಿಗಳ ಬಂಧಿಸಲು ವಿಶೇಷ ತಂಡ ರಚನೆ ಮಾಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಜಿಲ್ಲಾಡಳಿತದಿಂದ ಪೊಲೀಸರಿಗೆ ಸಂಪೂರ್ಣ ಸಹಕಾರ ಕೊಡುತ್ತೇವೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದ ಖಾದರ್ .

No Ads
No Reviews
No Ads

Popular News

No Post Categories
Sidebar Banner
Sidebar Banner