No Ads

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ 7ನೇ ತರಗತಿ ವಿದ್ಯಾರ್ಥಿ ತ್ರಿಶಾಲ್ ನೇಣಿಗೆ ಶರಣು!

ಜಿಲ್ಲೆ 2025-01-10 17:21:44 64
post

ತುಮಕೂರು: ಕ್ಷುಲ್ಲಕ ವಿಚಾರಕ್ಕೆ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಧಾರುಣ ಘಟನೆಯೊಂದು ತುಮಕೂರು (Tumkuru) ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ತ್ರಿಶಾಲ್ (13) (Trishal) ಮೃತ ದುರ್ದೈವಿಯಾಗಿದ್ದು, ಈತ ಶಾಲಾ ಸಮವಸ್ತ್ರದಲ್ಲೇ ಮನೆಯಲ್ಲಿ ಯಾರೂ ಇಲ್ಲದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತುಮಕೂರು ನಗರದ ವಿಜಯನಗರದ 2 ಮುಖ್ಯ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ನಗರದ ಸರ್ವೊದಯ ಸ್ಕೂಲ್ ನಲ್ಲಿ 7 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ತ್ರಿಶಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಅವರ ಪುತ್ರ. ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಿದ್ದ. ಇಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೃತ ವಿದ್ಯಾರ್ಥಿ ತ್ರಿಶಾಲ್ ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರವಾಗಿ ಸ್ನೇಹಿತರ ಜೊತೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.

ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Ads
No Reviews
No Ads

Popular News

No Post Categories
Sidebar Banner
Sidebar Banner