ಬೆಂಗಳೂರು: ಹೊಸ ವರ್ಷದ ಸಂಭ್ರಮದಲ್ಲಿ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಶಾಕ್ ನೀಡಿದ್ದು, ಬಿಎಂಟಿಸಿ (BMTC), ಕೆಎಸ್‌ಆರ್ಟಿಸಿ (KSRTC) ಸೇರಿ ಎಲ್ಲಾ ರೀತಿಯ ಸಾರಿಗೆ ಬಸ್ಗಳ ದರ ಹೆಚ್ಚಳ ಮಾಡಿದೆ. ಸರ್ಕಾರ ನಿರ್ಧಾರದ ವಿರುದ್ಧ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಟಿಕೆಟ್ ದರ ಹೆಚ್ಚಳ ಖಂಡಿಸಿ ಬಿಜೆಪಿ (BJP) ನಾಯಕರು ಬೀದಿಗಳಿದಿದ್ದು, ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ (Protest) ನಡೆಸಿದರು.
ಬಸ್ ನಿಲ್ದಾಣದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರಯಾಣಿಕರಿಗೆ ಹೂ ಕೊಟ್ಟು ರಾಜ್ಯ ಸರ್ಕಾರದ ಪರವಾಗಿ ಬಿಜೆಪಿ ನಾಯಕರು ಕ್ಷಮೆ ಕೇಳಿದರು
Log in to write reviews