ಬಾಗಲಕೋಟೆ : ಬಾಗಲಕೋಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ ಚರಂತಿಮಠ್, ಸಂತೋಷ ಹೊಕ್ರಾಣಿ ಮತ್ತು ಅನೇಕ ಮುಖಂಡರು ಮತ್ತು ಅವರ ನೂರಾರು ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಇಂದು ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೇರ್ಪಡೆಯಾದರು. ಕಾಂಗ್ರೆಸ್ ತತ್ವ, ಸಿದ್ಧಾಂತ ಒಪ್ಪಿ ಪಕ್ಷದ ಮೇಲೆ ನಂಬಿಕೆ ಹಾಗೂ ವಿಶ್ವಾಸವಿಟ್ಟು ಸೇರ್ಪಡೆಯಾದ ಇವರೆಲ್ಲರಿಗೂ ಹೃತ್ಪೂರ್ವಕ ಸ್ವಾಗತ ಎಂದು ಸಚಿವರಾದ ಶ್ರೀ ಶಿವಾನಂದ ಪಾಟೀಲ್ ಅವರು ಹೇಳಿದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇನ್ನು ಹೆಚ್ಚಿನ ಬಲ ಬಂದಿದೆ ಈ ಬಾರಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದು ಖಂಡಿತ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಎಸ್ ಜಿ ನಂಜಯ್ಯನಮಠ ಅವರು ಹೇಳಿದರು. ಈ ವೇಳೆ ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ಶಾಸಕರಾದ ಎಚ್ ವೈ ಮೇಟಿ, ಮುಖಂಡರಾದ ಎಂ ಬಿ ಸೌದಾಗರ್, ಬಾಯಕ್ಕ ಮೇಟಿ, ರಕ್ಷಿತಾ ಈಟಿ ಮುಖಂಡರು ಉಪಸ್ಥಿತರಿದ್ದರು.
ಬಾಗಲಕೋಟೆಯಲ್ಲಿ ಬಿಜೆಪಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
No Ads
Log in to write reviews