ಅಕ್ರಮವಾಗಿ ಮಗುವನ್ನು ದತ್ತು ಪಡೆದ ರೀಲ್ಸ್ ಸ್ಟಾರ್, ಬಿಗ್‌ಬಾಸ್ ಸ್ಪರ್ಧಿ ಸೋನು ಗೌಡಗೆ ಕೊನೆಗೂ ರಿಲೀಫ್ ಸಿಕ್ಕಿದೆ. ಕಾನೂನು ಬಾಹಿರವಾಗಿ ಮಗವನ್ನು ದತ್ತು ಪಡೆದಿದ್ದ ಸೋನು ಗೌಡ ವಿರುದ್ಧ ಮಹಿಳಾ ಮತ್ತು ಮಕ್ಕಳ ಕಲ್ಯಾಣಧಿಕಾರಿ ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಇದಾದ ಬಳಿಕ ಮಾರ್ಚ್ 22ರಂದು ಬ್ಯಾಡರಹಳ್ಳಿ ಪೊಲೀಸರು ಸೋನು ಗೌಡರನ್ನು ಅರೆಸ್ಟ್ ಮಾಡಿದ್ದರು. ಇದೀಗ ಆರೋಪಿ ಸ್ಥಾನದಲ್ಲಿದ್ದ ಸೋನು ಶ್ರೀನಿವಾಸ್ ಗೌಡಗೆ PDJ ಕೋರ್ಟ್ನಿಂದ ತೀರ್ಪು ಹೊರಡಿಸಲಾಗಿದೆ. ಇನ್ನು, ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಎಂಬುವವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಅವರು ವಾದ ಮಂಡಿಸಿದ್ದರು. ಶ್ಯೂರಿಟಿ ಜೊತೆಗೆ 1 ಲಕ್ಷ ಬ್ಯಾಂಡ್ ಷರುತ್ತ ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಸೋನು ಗೌಡಗೆ ಕೊನೆಗೂ ರಿಲೀಫ್!
No Ads
Log in to write reviews