ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರಕೃತಿ ಸೌಂದರ್ಯ ಸವಿಯಲು ಹೋಗಿದ್ದವರ ಮೇಲೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಕಳೆದ ಏಪ್ರಿಲ್ 22ರಂದು ಏಕಾಏಕಿ ಗುಂಡಿನ ದಾಳಿ ಮಾಡಿ ಕನ್ನಡಿಗರು ಸೇರಿ ಒಟ್ಟು 26 ಮಂದಿಯನ್ನು ಬಲಿ ಪಡೆದಿದ್ದಾರೆ.
ಪಹಲ್ಗಾಮ್ ಉಗ್ರರ ಈ ಅಟ್ಟಹಾಸಕ್ಕೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗ್ತಿದೆ. ಪಾಕಿಸ್ತಾನ ಪ್ರಜೆಗಳು ಪಾಕ್ಗೆ ವಾಪಸ್ ಆಗಲು ನಾಳೆಯೇ ಡೆಡ್ಲೈನ್ ನೀಡಲಾಗಿದ್ದು, ಅಟಾರಿ ಗಡಿ ಮೂಲಕ ಪಾಕ್ ಪ್ರಜೆಗಳು ಭಾರತದಿಂದ ವಾಪಸ್ ಹೋಗುತ್ತಿದ್ದಾರೆ. ಪಾಕಿಸ್ತಾನ ಪ್ರಜೆಗಳನ್ನು ವಾಪಸ್ ಕಳುಹಿಸುವ ಹಿನ್ನೆಲೆಯಲ್ಲಿ ಗುಜರಾತ್ ಪೊಲೀಸರು ಅಕ್ರಮ ವಲಸಿಗರ ಪತ್ತೆಗೆ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ.
ಬಾಂಗ್ಲಾ ಹಾಗೂ ಪಾಕಿಸ್ತಾನದಿಂದ ವಲಸೆ ಬಂದಿದ್ದ ಸಾವಿರಕ್ಕೂ ಅಧಿಕ ವಲಸಿಗರನ್ನ ವಶಕ್ಕೆ ಪಡೆಯಲಾಗಿದೆ. ಅವರ ವಿಚಾರಣೆ ನಡೆಸುತ್ತಿರುವ ಗುಜರಾತ್ ಪೊಲೀಸರು, ಸಾಲು ಸಾಲಾಗಿ ಗಡಿಪಾರು ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದ ಎಲ್ಲಾ ರಾಜ್ಯಗಳ ಸಿಎಂಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದರು. ದೇಶದ ಒಳಗಿರುವ ಪಾಕಿಸ್ತಾನದ ಪ್ರಜೆಗಳನ್ನು ಹುಡುಕಿ, ಹುಡುಕಿ ಗಡಿಪಾರು ಮಾಡಲಾಗುತ್ತಿದೆ.
Log in to write reviews