No Ads

ಫ್ರೀ ಬಸ್ ಟಿಕೆಟ್ ಹಾರ ಹಾಕಿದ ವಿದ್ಯಾರ್ಥಿನಿ; ಮೂಕ ವಿಸ್ಮಿತರಾದ ಸಿದ್ದರಾಮಯ್ಯ

ಕರ್ನಾಟಕ 2024-04-23 12:11:34 188
post

  ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್​ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರ್ಪಣೆ ಮಾಡಿದ್ದಾಳೆ. ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿ ಎಂ.ಎ.ಜಯಶ್ರೀ ತಾವು ಶಕ್ತಿ ಯೋಜನೆ ಅಡಿಯಲ್ಲಿ ಬಸ್​ನಲ್ಲಿ ಉಚಿತವಾಗಿ ಪ್ರಯಾಣ ಬೆಳಸಿ ಸಂಗ್ರಹಿಸಿದ್ದ ಟಿಕೆಟ್​ಗಳಿಂದ ವಿಶೇಷವಾದ ಹಾರವನ್ನು ರೆಡಿ ಮಾಡಿ ಇಟ್ಟುಕೊಂಡಿದ್ದರು. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೇಯಸ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿನಿ ಎಂ.ಎ.ಜಯಶ್ರೀ ಅವರು ಫ್ರೀ ಟಿಕೆಟ್ ಹಾರವನ್ನು ಅರ್ಪಿಸಿದರು. ಈ ಉಚಿತ ಬಸ್ ಪ್ರಯಾಣದಿಂದ ನನ್ನ ವಿದ್ಯಾಭ್ಯಾಸ ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ ಎಂದು ಸಿಎಂಗೆ ಧನ್ಯವಾದ ತಿಳಿಸಿದ್ದಾರೆ

No Ads
No Reviews
No Ads

Popular News

No Post Categories
Sidebar Banner
Sidebar Banner