No Ads

ಹನುಮಾನ್‌ ಜಯಂತಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ ಧಾರವಾಡದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ

ಜಿಲ್ಲೆ 2024-04-23 15:19:25 106
post

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು, ಹನುಮಾನ ಜಯಂತಿ ಪ್ರಯುಕ್ತ ಶಿವಳ್ಳಿ ಗ್ರಾಮದ ಶ್ರೀ ಹನುಮಾನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಧಾರವಾಡ ಲೋಕಸಭಾ ವ್ಯಾಪ್ತಿಯ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಚುನಾವಣಾ ಪ್ರಚಾರ ಸಭೆ ಶಿವಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಬಸವೇಶ್ವರ, ದುರ್ಗಾದೇವಿ ಮತ್ತು ಕಲ್ಮೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ಪಾದಯಾತ್ರೆ ಮೂಲಕ ತೆರಳಿದ ಅಸೂಟಿ ಅವರು ಗ್ರಾಮದಲ್ಲಿ ಪ್ರಚಾರ ನಡಸಿದರು. ಈ ಬಾರಿ ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಬೇಕೆಂದು  ಮನವಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀಮತಿ ಶಿವಲೀಲಾ ಕುಲಕರ್ಣಿ, ಅರವಿಂದ ಏಗನಗೌಡ್ರ, ಈಶ್ವರ ಶಿವಳ್ಳಿ ಮತ್ತು ಪಕ್ಷದ ಹಿರಿಯರು, ಶಿವಳ್ಳಿ ಗ್ರಾಮದ ಕಾರ್ಯಕರ್ತರು ಮತ್ತು ಯುವಕರು ಉಪಸ್ಥಿತರಿದ್ದರು.

No Ads
No Reviews
No Ads

Popular News

No Post Categories
Sidebar Banner
Sidebar Banner