No Ads

ಕುಮಾರಸ್ವಾಮಿಗೆ ಹೃದಯ ಶಸ್ತ್ರ ಚಿಕಿತ್ಸೆ

ಕರ್ನಾಟಕ 2024-03-21 17:24:04 49
post

ಕಳೆದ ಮೂರು ದಿನಗಳ ಹಿಂದೆಯೇ ಹೆಚ್​ಡಿ ಕುಮಾರಸ್ವಾಮಿ ಅವರು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮಾಜಿ ಸಿಎಂ ಕುಮಾರಸ್ವಾಮಿಗೆ 3ನೇ ಬಾರಿ​​​ ಹೃದಯ ಶಸ್ತ್ರಚಿಕಿತ್ಸೆ ನೆರವೇರಿತು. ಇನ್ನು ಶಸ್ತ್ರ ಚಿಕಿತ್ಸೆ ಯಶಸ್ವಿಯಾದ ಹಿನ್ನೆಲೆ ಶಾಸಕರಾದ ಸಮೃದ್ಧಿ ಮಂಜು, ಹರೀಶ್ ಗೌಡ, ಸ್ವರೂಪ್ ಸೇರಿದಂತೆ JDS ನಾಯಕರು ಚೆನ್ನೈಗೆ ಆಗಮಿಸಿದ್ದಾರೆ. ಇನ್ನು ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ. ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ. my) ಅವರಿಗೆ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ (Heart Operation) ಯಶಸ್ವಿಯಾಗಿದ್ದು, ಈ ಕುರಿತು ಪುತ್ರ ನಿಖಿಲ್​ ಕುಮಾರಸ್ವಾಮಿ (Nikhil Kumaraswamy) ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ತಂದೆಯ ಆರೋಗ್ಯದ ಕುರಿತು ಹಂಚಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು(ಮಾ.21) ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು ಎಂದಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯೇ ಹೆಚ್​ಡಿ ಕುಮಾರಸ್ವಾಮಿ ಅವರು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮಾಜಿ ಸಿಎಂ ಕುಮಾರಸ್ವಾಮಿಗೆ 3ನೇ ಬಾರಿ​​​ ಹೃದಯ ಶಸ್ತ್ರಚಿಕಿತ್ಸೆ ನೆರವೇರಿತು. ಇನ್ನು ಶಸ್ತ್ರ ಚಿಕಿತ್ಸೆ ಯಶಸ್ವಿಯಾದ ಹಿನ್ನೆಲೆ ಶಾಸಕರಾದ ಸಮೃದ್ಧಿ ಮಂಜು, ಹರೀಶ್ ಗೌಡ, ಸ್ವರೂಪ್ ಸೇರಿದಂತೆ JDS ನಾಯಕರು ಚೆನ್ನೈಗೆ ಆಗಮಿಸಿದ್ದಾರೆ. ಜೊತೆಗೆ ಮತ್ತೊಂದೆಡೆ ರಾಮನಗರ, ಮಂಡ್ಯ, ಹಾಸನ, ಮೃಸೂರು ಸೇರಿದಂತೆ ರಾಜ್ಯಾದ್ಯಂತ ಹೆಚ್​ಡಿ ಕುಮಾರಸ್ವಾಮಿ ಅಭಿಮಾನಿಗಳು, ಬೆಂಬಲಿಗರು ಪ್ರಾರ್ಥನೆ ಸಲ್ಲಿಸಿದ್ದರು.  

No Ads
No Reviews
No Ads

Popular News

No Post Categories
Sidebar Banner
Sidebar Banner