IPS ಅಧಿಕಾರಿ ಪ್ರತಾಪ್ ರೆಡ್ಡಿ ಅವರ ಸ್ವಯಂ ನಿವೃತ್ತಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿಯವರು ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದರು. ಹಾಗಾಗಿ ಸರ್ಕಾರ ಏಪ್ರಿಲ್ 30ರಂದು ನಿವೃತ್ತಿಯಾಗಲು ಅನುಮತಿ ನೀಡಿದೆ. ಜೂನ್ 30ರಂದು ನಿವೃತ್ತಿಯಾಗಬೇಕಿದ್ದ DGP ಪ್ರತಾಪ್ ರೆಡ್ಡಿಯವರು 2 ತಿಂಗಳು ಮೊದಲೇ ಸ್ವಯಂ ನಿವೃತ್ತಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪ್ರತಾಪ್ ರೆಡ್ಡಿಯವರು ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು.
IPS ಅಧಿಕಾರಿ ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ ಅಂಗೀಕರಿಸಿದ ರಾಜ್ಯ ಸರ್ಕಾರ
No Ads
Log in to write reviews