No Ads

ಶೆಟ್ಟರ್ ಗೆ ನಾಚಿಕೆಯಾಗಬೇಕು : ಹೆಬ್ಬಾಳ್ಕರ್

ಜಿಲ್ಲೆ 2024-03-30 12:22:57 47
post

ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿ ಜನ್ ನ್ನು ಹುಬ್ಬಳ್ಳಿ - ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ ಕೊಡುಗೆ ಏನಿದೆ ಬೆಳಗಾವಿ ಜಿಲ್ಲೆಗೆ? ಈಗ ಇಲ್ಲಿಗೆ ಬಂದು ಕರ್ಮ ಭೂಮಿ ಕರ್ಮ ಭೂಮಿ ಎನ್ನುತ್ತಿದ್ದಾರೆ. ನಾವೇನು ಹುಚ್ಚರಾ? ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡಲು ಬಂದಿದ್ದೀರಾ? 6 ಬಾರಿ ಹುಬ್ಬಳ್ಳಿ ಜನರು ಅವರನ್ನು ಆಯ್ಕೆ ಮಾಡಿ ಕಳುಹಿಸಿದ್ದರು. ವಿರೋಧ ಪಕ್ಷದ ನಾಯಕರಾದರು, ಮಂತ್ರಿಯಾದರು, ಮುಖ್ಯಮಂತ್ರಿಯಾದರು, ಬಿಜೆಪಿ ಅಧ್ಯಕ್ಷರಾದರು. ಎಲ್ಲವನ್ನೂ ಅನುಭವಿಸಿದ್ದಂತವರನ್ನು ಹುಬ್ಬಳ್ಳಿ- ಧಾರವಾಡ ಜನರು ಹೊರಗೆ ಹಾಕಿದ್ದಾರೆ. ಮೋದಿಯವರು ಎಲ್ಲೋ ಹೋಗಿ ಚುನಾವಣೆಗೆ ನಿಂತಿದ್ದಾರೆ ಎಂದು ತಮ್ಮ ಬೆಳಗಾವಿ ಸ್ಪರ್ಧೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇವರೇನು ಮೋದಿಯಷ್ಟು ದೊಡ್ಡವರಾ? ನಾಚಿಕೆಯಾಗಬೇಕು ಇವರಿಗೆ ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶೆಟ್ಟರ್ ವಿರುದ್ಧ ಕಿಡಿಕಾರಿದ್ದಾರೆ.  

No Ads
No Reviews
No Ads

Popular News

No Post Categories
Sidebar Banner
Sidebar Banner