ಧಾರವಾಡ: ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಜೋಶಿ ಪರಾರಿ ಇದುವೇ ನಮ್ಮ ಗುರಿ ಎಂದು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರು ಹೇಳಿದರು. ಕವಲಗೇರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಧಾರವಾಡ ಲೋಕಸಭಾ ವ್ಯಾಪ್ತಿಯ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು. ಸದವಕಾಶಗಳು ಯಾವಾಗಲೂ ಬರುವುದಿಲ್ಲ. ಗ್ರಾಮದ ಎಲ್ಲಾ ಸಮುದಾಯದ ನಾಯಕರು, ಯುವಕರು ಒಗ್ಗಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡೋಣ. ಕಾಂಗ್ರೆಸ್ ಗೆಲ್ಲಿಸಿ ಸಂವಿಧಾನ ಉಳಿಸಿ ಎಂದರು. ಈ ಸಂದರ್ಭದಲ್ಲಿ ಶ್ರೀಮತಿ ಶಿವಲೀಲಾ ಕುಲಕರ್ಣಿ, ಅರವಿಂದ ಏಗನಗೌಡ್ರ, ಈಶ್ವರ ಶಿವಳ್ಳಿ, ಗಿರಿಮಲ್ಲಯ್ಯ ನಂದಿಕೋಲಮಠ, ಸಿದ್ದಪ್ಪ ಪ್ಯಾಟಿ, ಬಸಣ್ಣ ಮಾಳಾಪೂರ ಮತ್ತು ಪಕ್ಷದ ಹಿರಿಯರು, ಕವಲಗೇರಿ ಗ್ರಾಮದ ಸಮಸ್ತ ಕಾರ್ಯಕರ್ತರು ಮತ್ತು ಯುವಕರು ಉಪಸ್ಥಿತರಿದ್ದರು.
ಕಾಂಗ್ರೆಸ್ ಜಯಭೇರಿ ಜೋಶಿ ಪರಾರಿ ಇದುವೇ ನಮ್ಮ ಗುರಿ: ವಿನೋದ್ ಅಸೂಟಿ
No Ads
Log in to write reviews