ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರು ಕೂಡಲಸಂಗಮ ಕ್ಷೇತ್ರಕ್ಕೆ ತೆರಳಿ ಪೂಜೆ ಸಲ್ಲಿಸಿದರು. ತದನಂತರ ಕೂಡಲಸಂಗಮ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳನ್ನು ಭೇಟಿ ಆಗಿ ಆದರಪೂರ್ವಕವಾಗಿ ಸನ್ಮಾನಿಸಿ, ಆಶೀರ್ವಾದ ಪಡೆದುಕೊಂಡರು. ಲೋಕಸಭಾ ಚುನಾವಣೆಯಲ್ಲಿ ಗೆಲುವು ನಿಮ್ಮದಾಗಲಿ ಎಂದು ಪೂಜ್ಯ ಶ್ರೀಗಳು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಸಂಯುಕ್ತ ಪಾಟೀಲ್ ಅವರ ತಾಯಿ ಭಾಗ್ಯಶ್ರೀ ಪಾಟೀಲ್ ಹಾಗೂ ಇತರೆ ಮುಖಂಡರು ಸಾಥ್ ನೀಡಿದರು.
ಕೂಡಲ ಸಂಗಮದಲ್ಲಿ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ಆಶೀರ್ವಾದ ಪಡೆದ ಸಂಯುಕ್ತ ಪಾಟೀಲ್

No Ads
Log in to write reviews