ಗೃಹ ಲಕ್ಷ್ಮಿ ಹಣ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯಿಸಿದ್ದು, ಶೀಘ್ರ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ಹಾಕುತ್ತೇವೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣ ವಿಳಂಬ ಆಗಿರುವ ಕುರಿತು ಹಣ ಹಾಕೋದು ಸ್ವಲ್ಪ ವಿಳಂಬವಾಗಿತ್ತು. ಈಗ ಎಲ್ಲವೂ ಸರಿಯಾಗಿದೆ. ಬಾಕಿ ಇರುವ ಎರಡು ತಿಂಗಳ ಹಣವನ್ನು ಈಗ ಬ್ಯಾಂಕ್ ಖಾತೆಗೆ ಹಾಕುತ್ತೇವೆ. ಯಾವುದೇ ಫಿಲ್ಟರ್ ನಾವು ಮಾಡುತ್ತಿಲ್ಲ ಎಲ್ಲರಿಗೂ ಕೂಡ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ ಗ್ಯಾರಂಟಿಗಳನ್ನು ಮುಂದುವರಿಸುತ್ತೇವೆ.ಯಾವುದೇ ಕಾರಣಕ್ಕೂ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರರಹಿತ ಆರೋಪ ಎಂದರು.
ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ...ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು. ಇದು ಚುನಾವಣೆಗೋಸ್ಕರ ಮಾಡಿರುವ ಯೋಜನೆಗಳಲ್ಲ. ಚುನಾವಣೆ ಮುಗಿದ ಬಳಿಕವೂ ಯೋಜನೆಗಳು ಮುಂದುವರಿದಿವೆ. ಗೃಹಲಕ್ಷ್ಮೀ ಯೋಜನೆ ನಿರಂತರವಾಗಿ ಮುಂದುವರಿಯಲಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಗೃಹಲಕ್ಷ್ಮೀ ಯೋಜನೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ರಾಜ್ಯದಲ್ಲಿ ನಾಲ್ಕು ವರ್ಷಗಳ ಕಾಲ ಬಿಜೆಪಿಯವರು ಏನೆಲ್ಲ ಮಾಡಿದ್ದರೆನ್ನವುದು ಎಲ್ಲರಿಗೂ ಗೊತ್ತಿದೆ. ರಾಜ್ಯಪಾಲರ ಭಾಷಣವನ್ನು ಟೀಕಿಸುವುದಕ್ಕೂ ಮುನ್ನ ಬಿಜೆಪಿಯವರು ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ ..!

No Ads
Log in to write reviews