ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ 60 ಮತದೊಂದಿಗೆ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಗೆಲ್ಲಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಮಾವೇಶವನ್ನ ಉದ್ದೇಶಿಸಿ ಷಾ ಮಾತನಾಡಿದರು. ನರೇಂದ್ರ ಮೋದಿಯವರ ಸಂದೇಶ, ಅವರ ಕೆಲಸ, ಕಾಂಗ್ರೆಸ್ಸಿನ ಅಭಿವೃದ್ಧಿ ಶೂನ್ಯತೆ- ಭ್ರಷ್ಟಾಚಾರ ಕುರಿತು ಮನೆಮನೆಗೆ ಮಾಹಿತಿ ತಲುಪಿಸಿ. ಈ ಮೂಲಕ 28ಕ್ಕೆ 28 ಕ್ಷೇತ್ರಗಳಲ್ಲೂ ಎನ್‍ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ. 2014ರಲ್ಲಿ ಬಿಜೆಪಿಗೆ 43 ಶೇ ಮತದೊಂದಿಗೆ 17 ಕ್ಷೇತ್ರ, 2019ರಲ್ಲಿ 51 ಶೇ ಮತದೊಂದಿಗೆ 25 ಕ್ಷೇತ್ರದಲ್ಲಿ ಗೆಲ್ಲಿಸಿದ್ದೀರಿ. ಒಂದೆಡೆ ಪ್ರಧಾನಮಂತ್ರಿ ಮೋದಿಜೀ ಇದ್ದಾರೆ. ಮುಖ್ಯಮಂತ್ರಿ ಆಗಿದ್ದಾಗ ಮತ್ತು ಪ್ರಧಾನಮಂತ್ರಿ ಆಗಿರುವಾಗ ಅವರ ಮೇಲೆ ಭ್ರಷ್ಟಾಚಾರದ ಆರೋಪವೇ ಇರಲಿಲ್ಲ. ಇನ್ನೊಂದೆಡೆ 12 ಲಕ್ಷ ಕೋಟಿಯ ಭ್ರಷ್ಟಚಾರದ ಕೂಟ ಇಂಡಿ ಇದೆ ಎಂದು ಅಮಿತ್ ಷಾ ಟೀಕಿಸಿದ್ದಾರೆ.
ಇಂಡಿ 12 ಲಕ್ಷ ಕೋಟಿ ಭ್ರಷ್ಟಚಾರದ ಕೂಟ.
No Ads
Log in to write reviews