No Ads

ದೂರು ಕೊಡಲು ಬಂದ ಮಹಿಳೆ ಜೊತೆ ಕಚೇರಿಯಲ್ಲೇ Dysp ರಾಸಲೀಲೆ!

ಜಿಲ್ಲೆ 2025-01-03 12:23:12 150
post

ತುಮಕೂರು: ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಡಿವೈಎಸ್‌ಪಿ ಬಳಸಿಕೊಂಡಿರುವ ಘಟನೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ನಡೆದಿದೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಡಿವೈಎಸ್‌ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿದ ರಾಮಚಂದ್ರಪ್ಪ ಆಕೆಯನ್ನು ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ಶುರುಮಾಡಿದ್ದಾರೆ.

ಇನ್ನು ಮಹಿಳೆ ಜೊತೆ ಡಿವೈಎಸ್‌ಪಿ ರಾಮಚಂದ್ರಪ್ಪ ಬಲವಂತವಾಗಿ ನಡೆದುಕೊಳ್ಳುತ್ತಿದ್ದುದ್ದನ್ನು ಸೆರೆ ಹಿಡಿದ ವ್ಯಕ್ತಿಯೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

No Ads
No Reviews
No Ads

Popular News

No Post Categories
Sidebar Banner
Sidebar Banner